Connect with us

    LATEST NEWS

    ಕರಾವಳಿ ವಿಚಾರದಲ್ಲಿ ಬಿಜೆಪಿ ಮನಬಂದಂತೆ ನಡೆದುಕೊಳ್ಳುತ್ತದೆ – ನಾನೊಬ್ಬ ಪಾಪದವ, ಬಡಪಾಯಿ ಮಾತ್ರ ನಿಮಗೆ ವಜಾಮಾಡಲು ಸಿಕ್ಕಿದ್ದಾ?

    ಉಡುಪಿ ಮೇ 26: ನೈರುತ್ಯ ಪಧವಿದರ ಕ್ಷೇತಕ್ಕೆ ಪಕ್ಷೇತರರಾಗಿ ಚುನಾವಣೆ ಸ್ಪರ್ಧಿಸುತ್ತಿರುವ ಉಡುಪಿಯ ಮಾಜಿ ಶಾಸಕ ಬಿಜೆಪಿ ಮುಖಂಡ ಶಾಸಕ ರಘುಪತಿ ಭಟ್ ಅವರನ್ನು 6 ವರ್ಷಗಳ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಘುಪತಿ ಭಟ್ – ನಾನೊಬ್ಬ ಪಾಪದವ, ಬಡಪಾಯಿ ಮಾತ್ರ ನಿಮಗೆ ವಜಾಮಾಡಲು ಸಿಕ್ಕಿದ್ದಾ? ಎಂದು ಪ್ರಶ್ನಿಸಿದ್ದಾರೆ.


    ಉಡುಪಿಯಲ್ಲಿ ಮಾತನಾಡಿದ ಅವರು ಉಚ್ಛಾಟನೆಯಾದದ್ದು ಮಾಧ್ಯಮದ ಮೂಲಕ ತಿಳಿಯಿತು ಬೇಸರವಾಯಿತು. ಶಿಸ್ತು ಸಮಿತಿಯ ನೋಟಿಸ್ ಈವರೆಗೆ ನನಗೆ ತಲುಪಿಲ್ಲ. ಪಕ್ಷ ಎಂದರೆ ಜೀವ ಬಿಡುವ ಕಾರ್ಯಕರ್ತರಿಗೆ ನಿರಂತರ ನೋವಾಗುತ್ತಿದೆ. ಪಕ್ಷದ ಎಲ್ಲಾ ಹುದ್ದೆಯಿಂದ ವಜಾ ಮಾಡುವುದಾಗಿ ಹೇಳಿದ್ದಾರೆ. ಆದರೆ ನನ್ನದು ಕಾರ್ಯಕರ್ತ ಹುದ್ದೆ, ಪಕ್ಷದಲ್ಲಿ ನನಗೆ ಯಾವ ಹುದ್ದೆಯನ್ನು ಕೊಟ್ಟಿಲ್ಲ, ಬಿಜೆಪಿ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಸ್ಪಷ್ಟಪಡಿಸಬೇಕು ಎಂದರು. ಈ ವಜಾಕ್ಕೆಲ್ಲ ನಾನು ತಲೆ ಬಿಸಿ ಮಾಡಿಕೊಳ್ಳಲ್ಲ, ನಾನು ಮೋದಿಗೆ ಬೈದಿಲ್ಲ.. ರಾಜ್ಯದ ನಾಯಕರಿಗೆ ಬೈದಿಲ್ಲ, ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ.


    ಪಕ್ಷ ನಾಯಕರನ್ನು ಟೀಕೆ ಮಾಡಿದ ಜಗದೀಶ್ ಶೆಟ್ಟರ್ ಒಂದು ವರ್ಷದಲ್ಲಿ ವಾಪಾಸಾಗಿ ಲೋಕಸಭಾ ಟಿಕೆಟ್ ಪಡೆದುಕೊಂಡರು. ಇದು ಶಾಶ್ವತ ವಜಾ ಅಲ್ಲ ಪರಿಷತ್ ಚುನಾವಣೆಯಲ್ಲಿ ನಾನು ಗೆದ್ದ ಮೇಲೆ ವಜಾ ರದ್ದಾಗುತ್ತದೆ. ಒಬ್ಬ ಬಿಜೆಪಿ ಕಾರ್ಯಕರ್ತನನ್ನು ವಜಾ ಮಾಡಲು ಸಾಧ್ಯವಿಲ್ಲ ಎಂದರು. ಬಿಜೆಪಿ ಶಿಸ್ತು ಸಮಿತಿಗೆ ನನ್ನ ಹಲವು ಪ್ರಶ್ನೆಗಳನ್ನು ಕೇಳಿದ ರಘುಪತಿ ಭಟ್ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಏನು ಶಿಸ್ತು ಕ್ರಮವಾಗಿದೆ?, ಅಡ್ಡ ಮತದಾನ ಮಾಡಿದ ಇಬ್ಬರೂ ಶಾಸಕರನ್ನ ಏನು ಮಾಡಿದ್ದೀರಿ? ವಜಾ ಮಾಡಿದ್ದೀರಾ?, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬೆಂಬಲಿಸಿದ ಶಾಸಕರನ್ನು ವಜಾ ಮಾಡಿದ್ದೀರಾ?, ಅಗೋಚರವಾಗಿ ಬಿಜೆಪಿ ವಿರುದ್ಧ ಕೆಲಸ ಮಾಡುವವರ ಮೇಲೆ ಏನು ಕ್ರಮ ಆಗಿದೆ ಎಂದು ಪ್ರಶ್ನಿಸಿ ಅವರು, ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದರು. ಪಕ್ಷದ ದೃಷ್ಟಿಯಿಂದ ಜಿಲ್ಲಾಧ್ಯಕ್ಷರು ಶಾಸಕರು ಸುನಿಲ್ ಕುಮಾರ್ ಮಾಡುವುದು ಸರಿ ಇದೆ. ಪಕ್ಷದಿಂದ ವಜಾ ಮಾಡುವ ಸಮಾನ ನ್ಯಾಯ ಜಾರಿಗೆ ತನ್ನಿ ಎಂದರು. ನಾನೊಬ್ಬ ಪಾಪದವ, ಬಡಪಾಯಿ ಮಾತ್ರ ನಿಮಗೆ ವಜಾಮಾಡಲು ಸಿಕ್ಕಿದ್ದಾ?ನಾನು ವಿಚಲಿತನಾಗಿಲ್ಲ ಚುನಾವಣೆಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ. ಜಗದೀಶ್ ಶೆಟ್ಟರ್ ಅವರ ಪ್ರಕರಣವೇ ನನಗೆ ಮಾದರಿ. ಕರಾವಳಿ ಬಿಜೆಪಿ ಕಾರ್ಯಕರ್ತರಿಗೆ ಶಿಸ್ತು ಜಾಸ್ತಿ ಶಿಕ್ಷೆಯೂ ಜಾಸ್ತಿ, ಉಡುಪಿಯಲ್ಲಿ ನಾಲ್ವರು ಸಿಟ್ಟಿಂಗ್ ಎಂಎಲ್ಎಗಳನ್ನು ಬದಲಿಸಲಾಯಿತು. ಇದನ್ನ ಶಿವಮೊಗ್ಗದಲ್ಲಿ ಬೆಂಗಳೂರಿನಲ್ಲಿ ಬಾಗಲಕೋಟೆ ಹುಬ್ಬಳ್ಳಿಯಲ್ಲಿ ಮಾಡಕ್ಕಾಗುತ್ತಾ? ಉಡುಪಿಯಲ್ಲಿ ಪಾಪದ ಕಾರ್ಯಕರ್ತರು ಸಂಘ ಪಕ್ಷ ಅಂತ ಕೆಲಸ ಮಾಡುತ್ತಾರೆ, ಕರಾವಳಿ ವಿಚಾರದಲದಲ್ಲಿ ಬಿಜೆಪಿ ಮನಬಂದಂತೆ ನಡೆದುಕೊಳ್ಳುತ್ತದೆ. ಕರಾವಳಿಗೆ ಮೀಸಲಿಟ್ಟ ಸ್ಥಾನವನ್ನು ಶಿವಮೊಗ್ಗಕ್ಕೆ ಕೊಟ್ಟಿದ್ದಾರೆ. ಈ ಚುನಾವಣೆಯಲ್ಲಿ ಮತದಾರರು ಕಾರ್ಯಕರ್ತರು ಸರಿಯಾದ ಉತ್ತರ ಕೊಡುತ್ತಾರೆ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply