LATEST NEWS
‘ದಿ ವಾಲ್’ ಖ್ಯಾತಿಯ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಮುಖ್ಯ ಕೋಚ್
ಹೊಸದಿಲ್ಲಿ, ನವೆಂಬರ್ 3: ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಸುಲಕ್ಷಣಾ ನಾಯಕ್ ಹಾಗೂ ಆರ್.ಪಿ. ಸಿಂಗ್ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿ ಬುಧವಾರ ಅವಿರೋಧವಾಗಿ ರಾಹುಲ್ ದ್ರಾವಿಡ್ ಅವರನ್ನು ಭಾರತದ ಪುರುಷರ ಹಿರಿಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ.
ಯುಎಇಯಲ್ಲಿ ಸೌರವ್ ಗಂಗುಲಿ ಹಾಗೂ ಜಯ್ ಶಾ ಅವರೊಂದಿಗೆ ಮಾತುಕತೆ ನಡೆಸಿದ ನಂತರ ದ್ರಾವಿಡ್ ಭಾರತದ ಮುಖ್ಯ ಕೋಚ್ ಪಾತ್ರವನ್ನು ವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. ದ್ರಾವಿಡ್ ಇತ್ತೀಚೆಗೆ ಹುದ್ದೆಗೆ ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಇಂದು ಕೇವಲ ಔಪಚಾರಿಕವಾಗಿ ಬಿಸಿಸಿಐ ಪತ್ರಿಕಾ ಪ್ರಕಟಣೆಯನ್ನು ಕಳುಹಿಸಿದೆ.
ಭಾರತದ ಮಾಜಿ ನಾಯಕ ನ್ಯೂಝಿಲ್ಯಾಂಡ್ ವಿರುದ್ಧ ಮುಂಬರುವ ಸ್ವದೇಶಿ ಸರಣಿಯಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಹೇಳಿದೆ. ಈಗ ನಡೆಯುತ್ತಿರುವ ಐಸಿಸಿ ಟ್ವೆಂಟಿ- 20 ವಿಶ್ವಕಪ್ ನಂತರ ರವಿ ಶಾಸ್ತ್ರಿ ಅವರ ಉತ್ತರಾಧಿಕಾರಿಯನ್ನು ನೇಮಿಸಲು ಬಿಸಿಸಿಐ ಅಕ್ಟೋಬರ್ 26 ರಂದು ಈ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು.
You must be logged in to post a comment Login