LATEST NEWS
ಪ್ರಮೋದ್ ಮುತಾಲಿಕ್ ಒಬ್ಬ ದಾರಿಹೋಕ- ರಮಾನಾಥ ರೈ
ಪ್ರಮೋದ್ ಮುತಾಲಿಕ್ ಒಬ್ಬ ದಾರಿಹೋಕ- ರಮಾನಾಥ ರೈ
ಮಂಗಳೂರು ಅಕ್ಟೋಬರ್ 9: ಪ್ರತಿ ಹಿಂದೂ ಕುಟುಂಬಗಳು ರಕ್ಷಣೆಗೆ ಖಡ್ಗ ಹೊಂದಿರಬೇಕು ಎಂಬ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಮೋದ್ ಮುತಾಲಿಕ್ ಗೆ ಯಾರು ಹಿಂದೂ ಧರ್ಮದ ಪಾರುಪತ್ಯ ಕೊಟ್ಟಿಲ್ಲ. ಪ್ರಮೋದ್ ಮುತಾಲಿಕ್ ಒಬ್ಬ ದಾರಿಹೋಕ ಆತನ ಹೇಳಿಕೆಗಳಿಂದ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಕಿಡಿಕಾರಿದರು. ಹಿಂದೂ ಧರ್ಮದ ಬಗ್ಗೆ ಪ್ರಮೋದ್ ಮುತಾಲಿಕ್ ಅಂಥವರಿಂದ ಉಪದೇಶ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದರು.
ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಪಶ್ಚಾತ್ತಾಪ ಇಲ್ಲ
ಚಕ್ರವರ್ತಿ ಸೂಲಿಬೆಲೆ ಬಗ್ಗೆ ಹೀಯಾಳಿಸಿ ತಾನು ಮಾತನಾಡಿಲ್ಲ ಎಂದು ರೈ ಸಮಜಾಯಿಷಿ ನೀಡಿದ್ದಾರೆ. ಹೀಯಾಳಿಸಿ ಮಾತನಾಡಿದ್ದಾರೆ ಪ್ರೂ ಫ್ ಕೊಡಿ ಎಂದು ಹೇಳಿದ ಅವರು ಜನರು ಏನು ತಪ್ಪು ಮಾಡಿದರೂ ಅದಕ್ಕೆ ನಾನು ಜವಾಬ್ದಾರನಲ್ಲ ಎಂದು ಹೇಳಿದರು. ಚಕ್ರವರ್ತಿ ಸೂಲಿಬೆಲೆ ಬಗ್ಗೆ ನನ್ನ ಹೇಳಿಕೆಗೆ ಪಶ್ಚಾತ್ತಾಪ ಇಲ್ಲ ಎಂದವರು ಸ್ಪಷ್ಟಪಡಿಸಿದರು.
ಬಿಜೆಪಿ ಒಂದು ರಾಡಿಕಲ್ಸ್ ಗಳ ಕೂಟ ಎಂದು ಕಿಡಿಕಾರಿದ ಅವರು ಬಿಜೆಪಿಯಲ್ಲಿ ಯಾರೂ ಸಂಭಾವಿತರಿಲ್ಲ ಬಜರಂಗದಳದಲ್ಲಿ ಹೆಚ್ಚು ಕೇಸ್ ಇದ್ದವನೇ ಅಧ್ಯಕ್ಷನಾಗುತ್ತೇನೆ ಎಂದು ವ್ಯಂಗ್ಯವಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಧೈರ್ಯ ಕಳೆದುಕೊಂಡಿದೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನ ಬೆಂಬಲ ದೊರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಕಂಗೆಟ್ಟಿದ್ದಾರೆ ಎಂದು ಹೇಳಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಸ್ಸೆಸ್ ಹಾಗೂ ಎಸ್ ಡಿಪಿಐ ನಡುವೆ ಘರ್ಷಣೆ ನಡೆಯುತ್ತಿದೆ ಎಂದು ಅಭಿಪ್ರಾಯಪಟ್ಟರು.