BANTWAL
ರಾಯಿ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂಪನ್ನ

ಬಂಟ್ವಾಳ, ಮಾರ್ಚ್ 06: ಇಲ್ಲಿನ ರಾಯಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಜಾತ್ರಾ ಮಹೋತ್ಸವವು ಭಾನುವಾರ ಸಮಾಪನಗೊಂಡಿತು.
ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಗೌಡ ಮತ್ತಾವು, ಪ್ರಧಾನ ಅರ್ಚಕ ಡಿ.ರಾಮಚಂದ್ರ ಭಟ್, ಅರ್ಚಕರಾದ ಹರೀಶ್ ಭಟ್, ದಿನೇಶ್ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಭಜನಾ ಮಂಡಳಿ ಅಧ್ಯಕ್ಷ ರಾಜೇಶ್ ಸಪಲ್ಯ ಇದ್ದರು.