Connect with us

    KARNATAKA

    ರೈಲು ಹತ್ತುವಾಗ ಬಿದ್ದ ಮಹಿಳೆಯ ರಕ್ಷಣೆ ಮಾಡಿದ ಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿಗೆ, ನಗದು ನೀಡಿ ಗೌರವಿಸಿದ ರೈಲ್ವೇ ಇಲಾಖೆ…!

    ಉಡುಪಿ ಸೆಪ್ಟೆಂಬರ್ 20: : ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ಆರ್ ಪಿಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.


    ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಮಂಗಳೂರು ಮಾಡ್ಗಾವ್ ಪ್ಯಾಸೆಂಜರ್ ರೈಲು ಹತ್ತುವ ವೇಳೆ ಮಹಿಳೆ ಆಯತಪ್ಪಿ ಬಿದ್ದಿದ್ದರು. ತಕ್ಷಣವೇ ಸಮಯೋಚಿತ ಕಾರ್ಯಾಚರಣೆ ನಡೆಸಿದ ಆರ್ ಪಿ ಎಫ್ ಸಿಬ್ಬಂದಿ ಅರ್ಪಣಾ ಅವರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

    ಮಹಿಳಾ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ರೈಲ್ವೆ ಮಹಿಳಾ ಪ್ಯಾಸೆಂಜರ್ ಅಪಾಯದಿಂದ ಪಾರಾಗಿದ್ದಾರೆ. ಆರ್ ಪಿ ಎಫ್ ಸಿಬ್ಬಂದಿ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ಯವಾಗಿದೆ.

     

    ಆರ್‌ಪಿಎಫ್ ಮಹಿಳಾ ಸಿಬ್ಬಂದಿಗೆ ರೈಲ್ವೆಯಿಂದ ಬಹುಮಾನ

    ಆರ್‌ಪಿಎಫ್ ಸಿಬ್ಬಂದಿ ಅಪರ್ಣ ಅವರ ಸಮಯೋಚಿತ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕಾರವಾರದ ಆರ್‌ಆರ್‌ಎಂ ಆಕೆಗೆ 5000ರೂ. ನಗದು ಬಹುಮಾನವನ್ನು ಘೋಷಿಸಿದರು. ಕೊಂಕಣ ರೈಲ್ವೆಯ ಪ್ರಾದೇಶಿಕ ರೈಲ್ವೆ ಮ್ಯಾನೇಜರ್ ಆಶಾ ಶೆಟ್ಟಿ ಅವರು 5000ರೂ.ಗಳ ಚೆಕ್‌ನ್ನು ಅಪರ್ಣ ಅವರಿಗೆ ಉಡುಪಿ ನಿಲ್ದಾಣದಲ್ಲಿ ಹಸ್ತಾಂತರಿಸಿದರು.

     

    Share Information
    Advertisement
    Click to comment

    You must be logged in to post a comment Login

    Leave a Reply