LATEST NEWS
ರೈಲ್ವೆ ಇಲಾಖೆ ಪರೀಕ್ಷೆಗೆ ಜನಿವಾರ ಒಂದೇ ಅಲ್ಲ ಮಾಂಗಲ್ಯ ಸರ ಕೂಡ ಧರಿಸುವ ಹಾಗಿಲ್ಲ – ವಿಶ್ವಹಿಂದೂ ಪರಿಷತ್ ಗರಂ

ಮಂಗಳೂರು ಎಪ್ರಿಲ್ 27: ಇತ್ತೀಚೆಗೆ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿತ್ತು, ಆದರೆ ಇದೀಗ ಕೇಂದ್ರ ಸರಕಾರದ ಅಧೀನದಲ್ಲಿರುವ ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಯ ವೇಳೆ ಯಾವುದೇ ಧಾರ್ಮಿಕ ಸಂಕೇತಗಳನ್ನು ಅಭ್ಯರ್ಥಿಗಳು ಹೊಂದಿರಬಾರದು ಎಂದು ಪ್ರವೇಶ ಪತ್ರದಲ್ಲಿ ನಮೂದಿಸಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
ರೈಲ್ವೇ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಇದೇ ಎಪ್ರಿಲ್ 29 ರಂದು ಪರೀಕ್ಷೆ ನಡೆಯಲಿದ್ದು ಮಂಗಳೂರಿನಲ್ಲೂ ಪರೀಕ್ಷಾ ಕೇಂದ್ರ ಇದೆ. ಪರೀಕ್ಷೆ ಬರೆಯುವ ಮೊದಲು ಹಿಂದೂಗಳು ಅವರ ಧಾರ್ಮಿಕ ಚಿಹ್ನೆಗಳಾದ ಮಂಗಳಸೂತ್ರ, ಕಾಲುಂಗುರ, ತಿಲಕ, ಜನಿವಾರ, ಕೈಬಳೆ ಇನ್ನಿತರ ಎಲ್ಲವುಗಳನ್ನೂ ತೆಗೆದಿಟ್ಟು ಪರೀಕ್ಷಾ ಕೊಠಡಿ ಪ್ರವೇಶ ಮಾಡುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಆದೇಶದ ವಿರುದ್ದ ವಿಶ್ವಹಿಂದೂ ಪರಿಷತ್ ಗರಂ ಆಗಿದ್ದು, ರೈಲ್ವೆ ಇಲಾಖೆಯ ನರ್ಸಿಂಗ್ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯುವಂತೆ ಪ್ರವೇಶ ಪತ್ರದಲ್ಲಿ ಸೂಚನೆ – ಆದೇಶವನ್ನು ಕೈಬಿಡುವಂತೆ ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.

ರೈಲ್ವೆ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆಯು 29 ಏಪ್ರಿಲ್ 2025 ರಂದು ಮಂಗಳವಾರ ಬೋಂದೆಲ್ ನ ಮಣೇಲ್ ಶ್ರೀನಿವಾಸ್ ನಾಯಕ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ನಡೆಯಲಿದೆ, ಆ ಪರೀಕ್ಷೆ ಬರೆಯಬೇಕಾದರೆ ಹಿಂದೂಗಳು ಅವರ ಧಾರ್ಮಿಕ ಚಿನ್ಹೆಗಳಾದ ಮಂಗಳಸೂತ್ರ, ಜನಿವಾರ ಗಳನ್ನೂ ತೆಗೆದು ಬರೆಕ್ಷೆ ಬರೆಯುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ರೀತಿಯ ಆದೇಶ ಸರಿಯಲ್ಲ, ಇತ್ತೀಚಿಗೆ CET ಪರೀಕ್ಷೆ ಬರೆಯುವ ಸಂಧರ್ಭದಲ್ಲಿ ಹಿಂದೂಗಳ ಪವಿತ್ರ ಜನಿವಾರವನ್ನು ಕಿತ್ತು ಹಾಕಿರುವುದು ಹಿಂದೂಗಳ ಭಾವನೆದಕ್ಕೆಯಾಗಿದ್ದು, ಇಡೀ ದೇಶದ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಮುತ್ತೈದೆ ಹೆಣ್ಣುಮಗಳು ತಾಳಿ ಸರ ಕಳಚುವಂತೆ, ಸಿಂಧೂರ ಅಳಿಸುವಂತೆ ಮಾಡುವುದು, ಪವಿತ್ರ ಜನಿವಾರವನ್ನು ಕಿತ್ತುಹಾಕುವಂತೆ ಹೇಳುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟಾಗುತ್ತದೆ, ಹಿಂದೂ ಬಹುಸಂಖ್ಯಾತ ನಮ್ಮ ದೇಶದಲ್ಲಿ ಈ ರೀತಿಯ ಹಿಂದೂ ವಿರೋಧಿ ಧೋರಣೆ ಸಹಿಸಲು ಅಸಾಧ್ಯ ಹಾಗಾಗಿ ಪರೀಕ್ಷಾರ್ಥಿಗಳಿಗೆ ಯಾವುದೇ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ರೈಲ್ವೆ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆಯು 28.29 30 ಏಪ್ರಿಲ್ 2025 ರಂದು ಬೋಂದೆಲ್ ನ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ನಡೆಯಲಿದ್ದು, ಆ ಪರೀಕ್ಷೆ ಬರೆಯಬೇಕಾದರೆ ಹಿಂದೂಗಳು ಅವರ ಧಾರ್ಮಿಕ ಸಂಪ್ರದಾಯಗಳಾದ ಮಂಗಳಸೂತ್ರ, ಜನಿವಾರ ಗಳನ್ನೂ ತೆಗೆದು ಬರೆಕ್ಷೆ ಬರೆಯುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ರೀತಿಯ ಧಾರ್ಮಿಕ ವಿರೋಧಿ ಧೋರಣೆ ಸಹಿಸಲು ಅಸಾಧ್ಯ. ಮಾನ್ಯ ಜಿಲ್ಲಾಧಿಕಾರಿಗಳೇ / ಮಾನ್ಯ ಸಂಸದರೇ ಇಂತಹ ಆದೇಶವನ್ನು ಕೈಬಿಟ್ಟು ನಡೆಯಲಿರುವ ಪರೀಕ್ಷೆಯಲ್ಲಿ ಹಿಂದೂಗಳ ಭಾವನೆಗೆ ಧಕ್ಕೆಬಾರದ ರೀತಿಯಲ್ಲಿ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲು ಆಗ್ರಹಿಸಿದ್ದಾರೆ.
1 Comment