LATEST NEWS
ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಹವಾಮಾನ ಇಲಾಖೆ ಎಚ್ಚರಿಕೆ
ಮಂಗಳೂರು ಜೂನ್ 4: ರಾಜ್ಯದಲ್ಲಿ ಬಿರುಗಾಳಿ ಸಹಿತ ಬಾರಿ ಮಳೆಯಾಗಲಿದೆ ಎಂದು ಹವಮಾನಾ ಇಲಾಖೆ ಎಚ್ಚರಿಸಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉಳಿದಂತೆ ಬಹುತೇಕ ಜಿಲ್ಲೆಗಳ ಹಲವೆಡೆ ಗುಡುಗಿನಿಂದ ಕೂಡಿದ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜತೆಗೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತೆಲಂಗಾಣ, ರಾಯಲಸೀಮಾ, ಆಂಧ್ರಪ್ರದೇಶದ ಕರಾವಳಿ ಮತ್ತು ಕೇರಳ ಹಲವು ಸ್ಥಳಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಎಚ್ಚರಿಕೆ ನೀಡಿದೆ.

ಸೋಮವಾರ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉಳಿದಂತೆ ಬಹುತೇಕ ಜಿಲ್ಲೆಗಳ ಹಲವೆಡೆ ಗುಡುಗಿನಿಂದ ಕೂಡಿದ ಮಳೆ ಬೀಳಲಿದೆ ಎಂದು ಹೇಳಿದೆ.
ಮಂಗಳವಾರ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಬುಧವಾರ ಕರಾವಳಿ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.