LATEST NEWS
ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಪಿಯುಸಿ ವರೆಗೆ ಮಾತ್ರ ಜುಲೈ 19 ರಂದು ರಜೆ – ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರು ಜುಲೈ 18 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು ತನಕದ ಶಿಕ್ಷಣ ಸಂಸ್ಥೆಗಳಿಗೆ ಜುಲೈ 19 ಶುಕ್ರವಾರ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಮಂಗಳೂರು,ಉಳ್ಳಾಲ, ಮೂಡಬಿದ್ರೆ,ಮೂಲ್ಕಿ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಯಾವುದೇ ರಜೆ ಇಲ್ಲ. ಎಂದಿನಂತೆ ತರಗತಿಗಳು ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ದಿನಾಂಕ: 19-07-2024 ರಂದು ರಜೆಯನ್ನು ಘೋಷಿಸಲಾಗಿದೆ.
2) ರಜೆ ನೀಡಿರುವ ಸದ್ರಿ ತಾಲೂಕುಗಳಲ್ಲಿ ಸಂಬಂಧಪಟ್ಟ ವಿದ್ಯಾ ಸಂಸ್ಥೆಗಳು ಅವಕಾಶವಿದ್ದಲ್ಲಿ ವಿದ್ಯಾರ್ಧಿಗಳಿಗೆ ಅನುಕೂಲವಾಗುವಂತೆ ಅನ್ ಲೈನ್ ತರಗತಿಯನ್ನು ನಡೆಸಬಹುದರಾಗಿರುತ್ತದೆ.
3) ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು.
4) ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.
5) ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
6) ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.