BELTHANGADI
ಬೆಳ್ತಂಗಡಿ ತಾಲೂಕಿನಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ

ಬೆಳ್ತಂಗಡಿ ಜುಲೈ 04: ಬೆಳ್ತಂಗಡಿಯಲ್ಲಿ ರಾತ್ರಿಯಿಂದ ಭಾರೀ ಮಳೆಯಾಗಿದ್ದು ಇಂದು ಕೂಡ ಮಳೆಯಾಗುವ ಮುನ್ಸೂಚನೆ ಹಿನ್ನಲೆ ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಇಂದು(ಜುಲೈ 04) ರಜೆ ಘೋಷಣೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಇಂದು ಮುಂಜಾನೆಯಿಂದಲೇ ಮಳೆಯಾಗುತ್ತಿದೆ. ಮಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಜಿಟಿಜಿಟಿ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರವೇ ಸದ್ಯ ಅಂಗನವಾಡಿಯಿಂದ ಡಿಗ್ರಿ ಕಾಲೇಜುವರೆಗೆ ರಜೆ ಘೋಷಣೆ ಮಾಡಲಾಗಿದ್ದು, ಇನ್ನುಳಿದ ಎಲ್ಲಾ ತಾಲೂಕಿನಲ್ಲೂ ಶಾಲಾ ಕಾಲೇಜು ಎಂದಿನಂತೆ ನಡೆಯಲಿದೆ. ಸುಳ್ಯ ಹಾಗೂ ಪುತ್ತೂರು ತಾಲೂಕಿನಲ್ಲೂ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಮಂಗಳವಾರದವರೆಗೂ ಆರೆಂಜ್ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.