LATEST NEWS
ನವೆಂಬರ್ 23 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಹಿಂಗಾರು ಮಳೆ ಆರ್ಭಟ ಸಾಧ್ಯತೆ
ಮಂಗಳೂರು ನವೆಂಬರ್ 20: ಬಹುತೇಕ ಕಣ್ಮರೆಯಾಗಿದ್ದ ಹಿಂಗಾರು ಮಳೆ ಇದೀಗ ಮತ್ತೆ ಪುನರಾರಂಭವಾಗುವ ಸಾಧ್ಯತೆ ಇದ್ದು, ನವೆಂಬರ್ 23 ರಿಂದ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ನ.23ರಿಂದ ಮೂರು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಒಣಹವೆ ವಾತಾವರಣ ಕಂಡು ಬಂದಿದೆ. ಹಿಂಗಾರು ಮಳೆ ಸಹ ಕ್ಷೀಣವಾಗಿತ್ತು. ಇದೀಗ ನ.23 ರಿಂದ ನ.26ರ ವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ನ.23 ಹಾಗೂ 24ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
You must be logged in to post a comment Login