Connect with us

    LATEST NEWS

    ದಕ್ಷಿಣಕನ್ನಡದಲ್ಲಿ ಮತ್ತೆ ಮಳೆ ಆರ್ಭಟ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ

    ಮಂಗಳೂರು ಅಗಸ್ಟ್ 23 : ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಪ್ರಾರಂಭವಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಗಸ್ಟ್ 25 ಮತ್ತು 26 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


    ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಕಣ್ಮರೆಯಾಗಿತ್ತು, ಇದೀಗ ಮಳೆ ಬಿರುಸು ಪಡೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಗಸ್ಟ್ 23 ಮತ್ತು 24ರಂದು ಎಲ್ಲೋ ಅಲರ್ಟ್‌ ಮತ್ತು ಅಗಸ್ಚ್ 25 ಮತ್ತು 26ರಂದು ಆರೆಂಜ್‌ ಅಲರ್ಟ್‌ ಘೋಷಿಸಿದೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

    ಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಗುರುವಾರ ಸಾಧಾರಣ ಮಳೆಯಾಗಿದೆ. ಮಂಗಳೂರಿನಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.

    Share Information
    Advertisement
    Click to comment

    You must be logged in to post a comment Login

    Leave a Reply