Connect with us

    KARNATAKA

    ಬೆಂಗಳೂರಿನಲ್ಲಿ ಮಳೆ ತಂದ ಅನಾಹುತ, ಕೆಂಗೇರಿ ಕೆರೆಗೆ ಬಿದ್ದು ಅಣ್ಣ – ತಂಗಿ ಮೃತ್ಯು..!!?

    ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಅನೇಕ ಅನಾಹುತಗಳನ್ನು ಸೃಷ್ಟಿಸಿದೆ.  ವರುಣನ ಆರ್ಭಟಕ್ಕೆ   ಬೀದಿಬೀದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು  ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ.  ಇದೇ ವೇಳೆ ಕೆಂಗೇರಿಯಲ್ಲಿ  ಆಟವಾಡಲು ಹೋಗಿದ್ದ ಅಣ್ಣ-ತಂಗಿ ಮುಳುಗಿ ಸಾವನ್ನಪ್ಪಿದ್ದಾರೆ.

    ಜಾನ್ ಸೀನಾ (13), ಮಹಾಲಕ್ಷ್ಮೀ(11) ನಾಪತ್ತೆಯಾದವರಾಗಿದ್ದು, ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳು ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆ ಬಳಿ ಹೋಗಿದ್ದರು. ಆಟವಾಡುತ್ತಾ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಕೆರೆಯ ದಂಡೆ ಮೇಲೆ ಮಕ್ಕಳ ಬಟ್ಟೆ ಮತ್ತು ಬಿಂದಿಗೆ ಪತ್ತೆಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೋಲಿಸರು ದೌಡಾಯಿಸಿದ್ದು, ಶೋಧಕಾರ್ಯ ನಡೆದಿದೆ. ಕೆಂಗೇರಿ ಕೆರೆ ಬಳಿ ನಾಗಮ್ಮರ ಆಕ್ರಂದನ ಮುಗಿಲು ಮುಟ್ಟಿದೆ.

    Share Information
    Advertisement
    Click to comment

    You must be logged in to post a comment Login

    Leave a Reply