Connect with us

LATEST NEWS

ಮಂಗಳಾದೇವಿ – ಗಾಳಿ ಮಳೆಗೆ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ

ಮಂಗಳೂರು ಜೂನ್ 16: ಕರಾವಳಿಯಲ್ಲಿ ಮುಂಗಾರು ಮಳೆ ತನ್ನ ಆರ್ಭಟ ಮುಂದುವರೆಸಿದ್ದು. ಮಳೆ ಜೊತೆ ಭಾರಿ ಗಾಳಿ ಬೀಸುತ್ತಿದ್ದು, ಹಲವೆಡೆ ಅಪಾರ ಹಾನಿ ಸಂಭವಿಸಿದೆ.


ಇಂದು ಬೆಳಿಗ್ಗೆ ಸುರಿದಗಾಳಿ ಮಳೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಂಗಳಾದೇವಿ ರಾಮಕೃಷ್ಣ ಮಠದ ಮುಂಭಾಗ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ನಿರಂತರವಾಗಿ ಸುರಿಯುತ್ತಿದ್ದ ಗಾಳಿ ಮಳೆಯ ಪರಿಣಾಮ ಈ ಅವಘಡ ಸಂಭವಿಸಿದ್ದು, ಒಟ್ಟು 5 ವಿದ್ಯುತ್ ಕಂಬಗಳು ಒಂದು ಟ್ರಾನ್ಸ್ ಫಾರ್ಮರ್ ಗೆ ಹಾನಿಯಾಗಿದೆ.


ಅಲ್ಲದೆ ಕಂಬ ಉರುಳಿ ಬಿದ್ದ ಪರಿಣಾಮ ಒಂದು ದ್ವಿಚಕ್ರ ವಾಹನ ಕೂಡ ಹಾನಿಗೀಡಾಗಿದ್ದು, ಒಟ್ಟು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.