DAKSHINA KANNADA
ಉಪ್ಪಿನಂಗಡಿ – ಭಾರೀ ಮಳೆಗೆ ಮನೆಗಳಿಗೆ ಹಾನಿಯಾದರೂ ಸ್ಥಳಕ್ಕೆ ಬಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು ಮೇ 31: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿದ ಬಾರೀ ಮಳೆಯಿಂದಾಗಿ ಉಪ್ಪಿನಂಗಡಿ ಭಾಗದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಭಾರೀ ಮಳೆಯಿಂದಾಗಿ ಹರಿನಗರ ಎಂಬಲ್ಲಿ 30 ಕ್ಕೂ ಮಿಕ್ಕಿದ ಮನೆಗಳಿಗೆ ಹಾನಿಯಾಗಿದೆ. ಭಾರೀ ಪ್ರಮಾಣದ ಹಾನಿಯಾದರೂ ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಆರೋಪಿಸಲಾಗಿದೆ.

ಈ ನಡುವೆ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸದ ಅಧಿಕಾರಿಗಳಿಗೆ ಕರೆ ಮಾಡಿ ಮಾಜಿ ಶಾಸಕ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.