LATEST NEWS
ಮುಂದುವರೆದ ಮುಂಗಾರು ಮಳೆ ಪ್ರತಾಪ
ಮುಂದುವರೆದ ಮುಂಗಾರು ಮಳೆ ಪ್ರತಾಪ
ಮಂಗಳೂರು ಜೂನ್ 9: ಮುಂಗಾರು ಮಳೆಯ ಪ್ರತಾಪ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಂದುವರೆದಿದೆ. ಗುರುವಾರದಿಂದ ಸುರಿಯುತ್ತಿರುವ ಮಳೆ ಇಂದು ಕೂಡ ಮುಂದುವರೆದಿದೆ. ಬಾರಿ ಮಳೆಯ ಹಿನ್ನಲೆಯಲ್ಲಿ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ.
ಕರಾವಳಿಯಲ್ಲಿ ಶುಕ್ರವಾರ ರಾತ್ರಿ ಬಿದ್ದ ನಿರಂತರ ಮಳೆಗೆ ಮಂಗಳೂರಿನಲ್ಲಿ ಮನೆಗಳಿಗೆ ಹಾನಿಯಾಗಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಈ ನಡುವ ರಾತ್ರಿ ಸುರಿದ ಭಾರಿ ಮಳೆಗೆ ಮಂಗಳೂರಿನಲ್ಲಿ ಮಾರುಕಟ್ಟೆ ಸಮೀಪದ ಭವಂತಿ ರಸ್ತೆಯಲ್ಲಿ ಮನೆಯೊಂದರ ಗೋಡೆ ಕುಸಿದು ಬಿದ್ದಿದೆ. ಅಲ್ಲೆ ನಿಲ್ಲಿಸಿದ್ದ ಕೆಲವು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಅಲ್ಲದೆ ಮಂಗಳೂರಿನ ಆರ್‌ಟಿಒ ಕಚೇರಿ ಬಳಿ ಮರವೊಂದು ರಸ್ತೆಗುರುಳಿದಿದ್ದು, ರೈಲು ನಿಲ್ದಾಣದ ಬಳಿ ಮರ ಬಿದ್ದಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದೂ ಶಾಲೆಗಳಿಗೆ ರಜೆ ನೀಡಲಾಗಿದೆ. ಹಲವೆಡೆ ಕಾಲೇಜುಗಳೂ ರಜೆ ಘೋಷಿಸಿವೆ.
ಉಡುಪಿ ಜಿಲ್ಲೆಯ ಶಂಕರನಾರಾಯಣದ ಸರಕಾರಿ ಪದವಿಪೂರ್ವ ಕಾಲೇಜಿ ಮತ್ತು ಪ್ರೌಢ ಶಾಲೆಯ ಹಳೇ ಕಟ್ಟಡದ ಮುಂಭಾಗದ ಕಂಬಗಳು, ಚಾವಣಿ ಕುಸಿದು ಅಪಾರ ನಷ್ಟ ಸಂಭವಿಸಿದೆ.ಶಾಲಾ ಕಾಲೇಜಿಗೆ ರಜೆ ಇದ್ದುದರಿಂದ ಹೆಚ್ಚಿನ ಅನಾಹುತ ತಪ್ಪಿದೆ.
VIDEO