LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ – ನಾಳೆ ಜೂನ್ 28 ರಂದು ಅಂಗನವಾಡಿಯಿಂದ ಪ.ಪೂ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ಮಂಗಳೂರು ಜೂನ್ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವಡೆದೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.ಅಲ್ಲದೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನಲೆ ನಾಳೆ ಅಂದರೆ ಜೂನ್ 28 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಪ.ಪೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಉಡುಪಿಯಲ್ಲಿ ರಜೆ ಇಲ್ಲ ಎಂದ ಜಿಲ್ಲಾಧಿಕಾರಿ
ಉಡುಪಿಯಲ್ಲಿ ರೆಡ್ ಅಲರ್ಟ್ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿದಿಲ್ಲ. ಶಾಲಾ ಕಾಲೇಜು ತರಗತಿಗಳು ಜೂನ್ 28ರಂದು ಎಂದಿನಂತೆ ನಡೆಯಲಿದೆ. ಯಾವುದೇ ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸ್ಪಷ್ಟ ಪಡಿಸಿದ್ದಾರೆ.
