DAKSHINA KANNADA
ಮಾರ್ಚ್ 31 ರಿಂದ ದಕ್ಷಿಣ ಕನ್ನಡ , ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ..!

ಬೆಂಗಳೂರು : ಮಾರ್ಚ್ 31ರಿಂದ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಸೇರಿ 9 ಜಿಲ್ಲೆಗಳಲ್ಲಿ ಒಳ್ಳೆಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಉತ್ತರ ಕರ್ನಾಟಕ ಭಾಗದ ಬೀದರ್, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದೂ ಇಲಾಖೆ ಮಾಹಿತಿ ನೀಡಿದೆ.
