LATEST NEWS
ಬಿಸಿಲಿಗೆ ಕಂಗೆಟ್ಟಿದ್ದ ಮಂಗಳೂರಿನಲ್ಲಿ ಮಳೆಯ ಸಿಂಚನ

ಮಂಗಳೂರು ಮಾರ್ಚ್ 22 : ಬಿಸಿಲಿನ ಧಗೆಗೆ ಕಂಗಾಲಾಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಇಂದು ಮುಂಜಾನೆ ಮಳೆಯಾಗಿದೆ. ಬೆಳಿಗ್ಗೆಯಿಂದಲೇ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು ಕೆಲವೆಡೆ ಹನಿ ಹನಿ ಮಳೆಯಾಗುತ್ತಿದೆ.
ಮಂಗಳೂರು ನಗರದಲ್ಲಿ ಬೆಳಿಗ್ಗೆ ಗುಡುಗು ಮಿಂಚಿನಿಂದೊಡಗೂಡಿ ಸಣ್ಣ ಪ್ರಮಾಣದ ಮಳೆಯಾಗಿದೆ.
ಉಳ್ಳಾಲ ತಾಲ್ಲೂಕು ವ್ಯಾಪ್ತಿಯ ತಲಪಾಡಿ, ಕೋಟೆಕಾರು, ಬೀರಿ, ದೇರಳಕಟ್ಟೆ, ಕುತ್ತಾರು, ತೊಕ್ಕೊಟ್ಟು ಪ್ರದೇಶದಲ್ಲಿ ಬೆಳಿಗ್ಗೆ ಮಳೆಯಾಗಿದೆ. ಕೆಲವೆಡೆ ನೀರು ಹರಿದು ಹೋಗಿದೆ. ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಪ್ರದೇಶದಲ್ಲಿ ಜೋರು ಮಳೆ ಸುರಿದಿದೆ.
