LATEST NEWS
ಉಡುಪಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಮುಂಗಾರು ಮಳೆ…!!
ಮಂಗಳೂರು ಸೆಪ್ಟೆಂಬರ್ 24: ಇನ್ನೇನು ಮುಂಗಾರು ಮಳೆಯ ಋತು ಅಂತಿಮ ಹಂತದಲ್ಲಿರುವ ವೇಳೆ ಮತ್ತೆ ಮಳೆ ಪ್ರಾರಂಭವಾಗಿದೆ. ಕರಾವಳಿಯ ಉಡುಪಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಉತ್ತಮ ಮಳೆಯಾಗಿದೆ.
ಹವಮಾನ ಇಲಾಖೆ ಪ್ರಕಾರ ಸೆಪ್ಟೆಂಬರ್ 24 ರಂದು ಕರ್ನಾಟಕ ಕರಾವಲಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇದೇ ವೇಳೆ ಪಶ್ಚಿಮದ ಸಮುದ್ರದ ಮೇಲಿಂದ ಗಂಟೆಗೆ 35ರಿಂದ 45ಕಿ.ಮೀ. ವೇಗದ ಗಾಳಿ ಬೀಸುವ ನಿರೀಕ್ಷೆ ಇದ್ದು, ಸಮುದ್ರ ಪ್ರಕ್ಷುಬ್ಧಗೊಳ್ಳ ಲಿದೆ. ಹೀಗಾಗಿ ಮೀನುಗಾರರು, ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರಿನಲ್ಲೂ ಮಳೆ ಅಬ್ಬರ ಜೊರಾಗಿದ್ದು , ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗುತ್ತಿದೆ.