LATEST NEWS
ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟ – ರೆಡ್ ಅಲರ್ಟ್ ಘೋಷಣೆ
ಮಂಗಳೂರು, ಜುಲೈ 19: ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ಜುಲೈ 20 ಮತ್ತು 21 ರಂದು ಭಾರೀ ಮಳೆಯಯಾಗುವ ಸೂಚನೆಯನ್ನು ಭಾರತೀಯ ಹವಮಾನ ಇಲಾಖೆ ನೀಡಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಮುಂದುವರೆದಿದೆ. ಹವಮಾನ ಇಲಾಖೆ ಕರ್ನಾಟಕದ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆಯುವ ಸೂಚನೆ ನೀಡಿದ್ದು, ಇಂದು ರೆಡ್ ಅಲರ್ಟ್ ಘೋಷಿಸಿದೆ. ಜುಲೈ 21, 22, 23 ರಂದು ಆರೆಂಜ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ಸಾಧಾರಣ ಮಳೆ ಸುರಿದಿರುವುದು ವರದಿಯಾಗಿದೆ.ಸತತವಾಗಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಸಾಕಷ್ಟು ಹಾನಿಯೂ ಉಂಟಾಗಿತ್ತು. ದ.ಕ.ಜಿಲ್ಲೆಯಲ್ಲಿ ಜನವರಿ 1ರಿಂದ ಶನಿವಾರದವರೆಗೆ ಸರಾಸರಿ 2,911 ಮಿಲಿಮೀಟರ್ ಮಳೆಯಾಗಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ವಾಡಿಕೆಯ ಮಳೆ 1930 ಮಿಲಿ ಮೀಟರ್. ಈ ವರ್ಷ 981 ಮಿ.ಮೀ ಅಧಿಕ ಮಳೆ ಸುರಿದಿದೆ.