LATEST NEWS
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ – ಇಬ್ಬರು ಮೃತ್ಯು
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ – ಇಬ್ಬರು ಮೃತ್ಯು
ಮಂಗಳೂರು ಜುಲೈ 7: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಕ್ಷೀಣಗೊಂಡಿದ್ದ ಮಳೆ ನಿನ್ನೆಯಿಂದ ಮತ್ತೆ ಚುರುಕಾಗಿದೆ. ಶುಕ್ರವಾರ ಪುನರ್ವಸು ನಕ್ಷತ್ರ ಆರಂಭವಾಗಿದ್ದು ನಂಬಿಕೆಯಂತೆ ಭಾರಿ ಮಳೆ ಸುರಿಯುತ್ತಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಮೂಡಬಿದಿರೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲಿ ಸುರಿಯುತ್ತಿರು ಭಾರಿ ಮಳೆಗೆ ನದಿಗಳು ಅಪಾಯ ಮಟ್ಟದಲ್ಲಿ ಉಕ್ಕಿ ಹರಿಯುತ್ತಿದೆ.
ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಮೂಡಬಿದಿರೆ ಸೇರಿದಂತೆ ,ಸುಳ್ಯ, ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಪುತ್ತೂರಿನ ಹೆಬ್ಬಾರ ಬೈಲಿನಲ್ಲಿ ತಡೆಗೋಡೆ ಕುಸಿದು ಇಬ್ಬರು ಸಾವನಪ್ಪಿದ ಘಟನೆ ನಡೆದಿದೆ. ಮನೆಯ ಮೇಲೆ ಬಿದ್ದ ತಡೆಗೋಡೆ ಬಿದ್ದ ಕಾರಣ ಮನೆಯಲ್ಲಿ ಮಲಗಿದ್ದ ಅಜ್ಜಿ ಮತ್ತು ಮೊಮ್ಮಗ ಸಾವನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪುತ್ತೂರು ಸಹಾಯಕ ಕಮಿಷನರ್ ಹೆಚ್.ಕೃಷ್ಣಮೂರ್ತಿ ಭೇಟಿ ಪರಿಶೀಲನೆ ನಡೆಸಿದ್ದಾರೆ.