LATEST NEWS
ಮಳೆ ಹಿನ್ನಲೆ – ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ಇಂದು ರಜೆ
ಮಂಗಳೂರು ಮೇ 19: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆ ಇಂದು (ಮೇ 19)ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಘೋಷಿಸಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ. ಇನ್ನು ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತ ಗೊಂಡಿದೆ.ರಸ್ತೆಗಳಲ್ಲಿ ನೀರು ತುಂಬಿ ಸಂಚಾರಕ್ಕೆ ಕಷ್ಟವಾಗಿದೆ.