LATEST NEWS
ಉಳ್ಳಾಲ – ಇಬ್ಬರನ್ನು ಬಲಿ ಪಡೆದ ಮುಂಗಾರು ಮಳೆ

ಉಳ್ಳಾಲ, ಮೇ 30: ನಿನ್ನ ರಾತ್ರಿಯಿಂದ ಸುರಿಯುತ್ತಿರುವ ಮಳೆ ದಕ್ಷಿಣಕನ್ನಡ ಜಿ್ಲ್ಲಯಲ್ಲಿ ಅಲ್ಲೋಲಕಲ್ಲೋಲ ಸೃಷ್ಠಿಸಿದೆ. ನಿರಂತರ ಸುರಿದ ಧಾರಾಕಾರ ಮಳೆಗೆ ಉಳ್ಳಾಲ ತಾಲೂಕಿನಾದ್ಯಂತ ಜಲಪ್ರಳಯ ಉಂಟಾಗಿದೆ. ಮಳೆ ಅವಾಂತರಕ್ಕೆ ಉಳ್ಳಾಲ ತಾಲೂಕಿನಲ್ಲಿ ಎರಡು ಪ್ರತ್ಯೆಕ ಅವಘಡಗಳಲ್ಲಿ ಇಬ್ಬರು ಸಾವನಪ್ಪಿದ್ದಾರೆ.
ಬೆಳ್ಳ ಗ್ರಾಮದ ಕಾನಕರೆ ಎಂಬಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದ ಪರಿಣಾಮ ಬಾಲಕಿಯೊಬ್ಬಳು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಜನಾಡಿ ಬಳಿಯ ಮೊಂಟೆಪದವು ಸಮೀಪದ ಕೋಡಿ ಎಂಬಲ್ಲಿ ಮನೆ ಮೇಲೆ ಗುಡ್ಡ ಜರಿದು ಮಹಿಳೆ ಮೃತಪಟ್ಟಿದ್ದು, ಉಳಿದವರ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.

ಕಾನಕೆರೆ ನಿವಾಸಿ ನೌಶಾದ್ ಎಂಬವರ ಪುತ್ರಿ ಫಾತಿಮ ನಯೀಮ(10) ಮೃತಪಟ್ಟ ಬಾಲಕಿ. ಕಾನಕರೆಯ ನೌಶಾದ್ ಅವರ ಮನೆಗೆ ಹಿಂಬದಿ ಗುಡ್ಡೆಯ ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಬಾಲಕಿಯ ಮೇಲೆ ಬಿದ್ದಿದೆ. ಬಾಲಕಿಯನ್ನ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಮಂಜನಾಡಿ ಗ್ರಾಮದ ಮೊಂಟೆಪದವು ಕೋಡಿಯಲ್ಲಿ ಗುಡ್ಡ ಜರಿದ ಪರಿಣಾಮ ಮಣ್ಣಿನಡಿ ಸಿಲುಕಿದ್ದ ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ (50) ಮೃತಪಟ್ಟಿದ್ದಾರೆ. ಕಾಂತಪ್ಪ ಪೂಜಾರಿ ಅವರ ಕುಟುಂಬ ಮಲಗಿದ್ದ ಕೊಠಡಿಯ ಭಾಗಕ್ಕೆ ಗುಡ್ಡ ಜರಿದು ಬಿದ್ದ ಪರಿಣಾಮ ದುರಂತ ಸಂಭವಿಸಿದೆ. ಕಾಂತಪ್ಪ ಪೂಜಾರಿ ಕಾಲು ಮುರಿದಿದ್ದು ಗಂಭೀರ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರು ಮಹಿಳೆ ಮತ್ತು ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಎನ್ ಡಿಆರ್ ಎಫ್, ಎಸ್ ಡಿ ಆರ್ ಎಫ್ ಭೇಟಿ ನೀಡಿದ್ದು ರಕ್ಷಣಾ ಕಾರ್ಯ ಮುಂದುವರಿದಿದೆ.