LATEST NEWS
ನಾಳೆಯಿಂದ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ – ಹವಾಮಾನ ಇಲಾಖೆ
ಬೆಂಗಳೂರು ಮಾರ್ಚ್ 28: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಕರಾವಳಿ ಜಿಲ್ಲೆಗಳನ್ನು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 29 ರಿಂದ ಮಾರ್ಚ್ 31ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ತಾಪಮಾನ ಹೆಚ್ಚಳವಾದಂತೆ ಆಗಾಗ್ಯೆ ಅಕಾಲಿಕ ಮಳೆ ಬೀಳಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಮಾಹಿತಿ ನೀಡಿದ್ದಾರೆ.
ಈಗಾಗಲೇ ಕಳೆದ ಎರಡು ದಿನಗಳಿಂದ ಕರಾವಳಿ ಕೆಲವು ಪ್ರದೇಶಗಳಲ್ಲಿ ಅಕಾಲಿಕೆ ಮಳೆ ಸುರಿಯುತ್ತಿದೆ.