ಮಂಗಳೂರು ಸೆಪ್ಟೆಂಬರ್ 18: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು , ಅಲ್ಲಲ್ಲಿ ಮಳೆಯಾಗಿದೆ. ಇದೀಗ ಉಡುಪಿ, ಉತ್ತರ ಕನ್ನಡ ಸೇರಿದಂತೆ 8 ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗುವ ಸಾಧ್ಯತೆಗಳಿದ್ದು, ಈ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.


ಮಂಗಳೂರಿನಲ್ಲಿ ಹಗಲು ಮೋಡದ ಜೊತೆ ಬಿಸಿಲಿನ ವಾತಾವರಣವಿದ್ದು ಸಂಜೆ ವೇಳೆ ಸಾಧಾರಣ ಮಳೆಯಾಗಿದೆ. ಇನ್ನು ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಶುಕ್ರವಾರ ಹಳದಿ ಅಲರ್ಟ್‌ ಘೋಷಿಸಲಾಗಿದೆ.

Share Information