Connect with us

    LATEST NEWS

    ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಎಲ್ಲೋ ಅಲರ್ಟ್

    ಬೆಂಗಳೂರು ಮೇ 16 : ಮುಂಗಾರು ಪೂರ್ವ ಮಳೆ ಪ್ರಾರಂಭವಾಗುವ ಲಕ್ಷಣಗಳು ಕರಾವಳಿ ಜಿಲ್ಲೆಗಳಲ್ಲಿ ಕಂಡು ಬರುತ್ತಿದ್ದು, ಅಲ್ಲದೆ ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18ರಿಂದ 21ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

    Image

    ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

    ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಈ ಎರಡು ದಿನಗಳಲ್ಲಿ ಗುಡುಗು ಸಿಡಿಲುಗಳಿಂದ ಕೂಡಿದ ಮಳೆಯಾಗಲಿದೆ. ಕೆಲವೆಡೆ 6.45 ಸೆಂ.ಮೀ.ಯಿಂದ 11.55 ಸೆಂ.ಮೀ.ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದಿದ್ದು ವಾತಾವರಣ ತಂಪಾಗಿದೆ. ನಗರದಲ್ಲಿಯೂ ಸಹ ಮುಂದಿನ 5 ದಿನಗಳ ಕಾಲ  ಮಳೆಯಾಗಲಿದೆ. ಮಳೆ ಜೊತೆಗೆ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ, ಗುಡುಗು ಮಿಂಚು ಇರಲಿದೆ. ಸಾರ್ವಜನಿಕರು ಗಾಳಿ ಮಳೆಯ ವೇಳೆ ಮರದ ಕೆಳಗೆ, ಇನ್ನಿತರೆ ಅಸುರಕ್ಷಿತ ಜಾಗಗಳಲ್ಲಿ ಇರದಂತೆ ಇಲಾಖೆ ಎಚ್ಚರಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲೂ ಮುಂಜಾನೆಯಿಂದಲೇ ಮೋಡಕವಿದ ವಾತಾವರಣವಿದ್ದು, ಮಳೆಯ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply