Connect with us

    FILM

    ಬ್ಲೂಫಿಲ್ಮ್ ನಿರ್ಮಾಣ – ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ ಗೆ 14ದಿನ ನ್ಯಾಯಾಂಗ ಬಂಧನ

    ಮುಂಬೈ: ಬ್ಲೂ ಫಿಲ್ಮ್ ನಿರ್ಮಾಣ ಹಾಗೂ ಮೊಬೈಲ್‌ ಆ್ಯಪ್ ಗಳ ಮೂಲಕ ಬಿತ್ತರಿಸಿದ ಆರೋಪದ ಮೇಲೆ ಬಂಧಿತರಾಗಿರುವ ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾನನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


    ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಜುಲೈ 19ರಂದು ಬಂಧಿಸಿದ್ದರು. ನಂತರ ಆರೋಪಿಗಳನ್ನು ಜುಲೈ 27 ರವರೆಗೆ ವಿಚಾರಣೆಗಾಗಿ ಪೊಲೀಸ್‌ ವಶಕ್ಕೆ ನೀಡಲಾಗಿತ್ತು. ಈ ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದು ನಮ್ಮ ಬಳಿ ಸಾಕಷ್ಟು ಪುರಾವೆಗಳಿವೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.


    ಈ ಪ್ರಕರಣದಲ್ಲಿ ರಾಜ್‌ ಕುಂದ್ರಾ ಸೇರಿದಂತೆ ಪೊಲೀಸ್‌ ವಶದಲ್ಲಿರುವ ಎಲ್ಲಾ 10 ಆರೋಪಿಗಳಿಗೂ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply