Connect with us

LATEST NEWS

ಪುಟ್ ಪಾತ್ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್ – 15 ಮಂದಿ ಸಾವು

ಸೂರತ್‌: ಪುಟ್ ಪಾತ್ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಟ್ರಕ್ ಒಂದು ಹರಿದು 15 ಮಂದಿ ಸಾವಿಗೀಡಾಗಿರುವ ಘಟನೆ ಗುಜರಾತ್‌ನ ಕೋಸಂಬಾದಲ್ಲಿ ನಡೆದಿದೆ.


ಟ್ರ್ಯಾಕ್ಟರ್‌ಗೆ ಡಿಕ್ಕಿಯಾಗಿರುವ ಕಬ್ಬು ತುಂಬಿದ್ದ ಟ್ರಕ್‌, ಚಾಲಕನ ನಿಯಂತ್ರಣಕ್ಕೆ ಸಿಗದೆ ಫೂಟ್‌ಪಾತ್‌ ಮೇಲೆ ಸಾಗಿದೆ. ಅಲ್ಲಿ ಮಲಗಿದ್ದವರ ಪೈಕಿ 15 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟಿರುವ ಎಲ್ಲರೂ ರಾಜಸ್ಥಾನದಿಂದ ಬಂದಿದ್ದ ವಲಸೆ ಕಾರ್ಮಿಕರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೋಮವಾರ ರಾತ್ರಿ ಕಾರ್ಮಿಕರು ಫೂಟ್‌ಪಾತ್‌ ಮೇಲೆ ನಿದ್ರೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಕಾರ್ಮಿಕರೆಲ್ಲರೂ ರಾಜಸ್ಥಾನದ ಬಾಂಸ್ವಾಡಾ ಮೂಲದವರೆಂದು ವರದಿಯಾಗಿದೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Facebook Comments

comments