FILM
ಲಾಂಗ್ ಹಿಡಿದು ರೀಲ್ಸ್ – ರಜತ್ ಕಿಶನ್ ಹಾಗೂ ವಿನಯ್ ಗೌಡ ಅರೆಸ್ಟ್

ಬೆಂಗಳೂರು ಮಾರ್ಚ್ 24: ರೀಲ್ಸ್ ಗಾಗಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡಿದ್ದಕ್ಕೆ ಬಿಗ್ ಬಾಸ್ ಸ್ಪರ್ಧಿ ಹಾಗೂ ಕಿರುತೆರೆ ನಟರಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಬಸವೇಶ್ವರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ರೀಲ್ಸ್ ವಿಡಿಯೋಗಾಗಿ ರಜತ್ ಮತ್ತು ವಿನಯ್ ಗೌಡ ಅವರು ಮಾರಕಾಸ್ತ್ರ ಹಿಡಿದು ಸಿನೆಮಾ ಹಾಡಿಗೆ ವಿಡಿಯೋ ಮಾಡಿದ್ದರು. ಇದು ವೈರಲ್ ಆಗುತ್ತಿದ್ದಂತೆ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ವಿನಯ್ ಹಾಗೂ ರಜತ್ ಮೇಲೆ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಮತ್ತು ವಿನಯ್ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆಯ ನಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸುಮ್ನೆ ಸ್ಟೈಲ್ ಮಾಡಿ ವಿಡಿಯೋ ಮಾಡಲು ಹೋಗಿ ಇಬ್ಬರು ನಟರು ಅರೆಸ್ಟ್ ಆಗಿದ್ದಾರೆ.
Pingback: ಹೆಣ್ಣು ಮಗುವಿನ ತಂದೆಯಾದ ಕೆ.ಎಲ್ ರಾಹುಲ್ - themangaloremirror.in