Connect with us

LATEST NEWS

ರಾಜಧಾನಿ ಎಕ್ಸಪ್ರೆಸ್ ನ ವೇಗಕ್ಕೆ ಪುಡಿಯಾದ ಬೈಕ್..ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರ…!!

ಮುಂಬೈ: ವೇಗವಾಗಿ ಬರುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಕ್ಷಣಾರ್ಧದಲ್ಲಿ ಸಾವಿನ ದವಡೆಯಿಂದ ಪಾರಾಗಿರುವ ಘಟನೆ ಮುಂಬೈನ ರೈಲ್ವೆ ಕ್ರಾಸಿಂಗ್‌ ಬಳಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ರೈಲ್ವೆ ಗೇಟ್‌ಗಳಿಲ್ಲದ ರೈಲ್ವೆ ಕ್ರಾಸಿಂಗ್ ಇದಾಗಿದ್ದು, ಮುನ್ನೆಚರಿಕೆ ಇದ್ದರೂ ಈತ ರೈಲ್ವೆ ಛೇದಕವನ್ನು ದಾಟಲು ಪ್ರಯತ್ನಿಸಿ ಸಾವಿಗೆ ಆಹ್ವಾನ ನೀಡಿದ್ದ. ಆದರೆ ಈತನ ಅದೃಷ್ಟ ಚೆನ್ನಾಗಿತ್ತೇನೋ ಬದುಕುಳಿದಿದ್ದಾನೆ. ಈ ವಿಡಿಯೋದಲ್ಲಿರುವ ಸಮಯದ ಪ್ರಕಾರ ಇದು ಫೆಬ್ರವರಿ 12 ರಂದು ಸಂಜೆ 6:18 ರ ಸುಮಾರಿಗೆ ನಡೆದಿದೆ. ರಾಜಧಾನಿ ಎಕ್ಸ್‌ಪ್ರೆಸ್ ರೈಲು ಇದಾಗಿದ್ದು, ಈ ಭಯಾನಕ ಘಟನೆ ಮುಂಬೈನಲ್ಲಿ ನಡೆದಿದೆ.


ವೀಡಿಯೊದಲ್ಲಿ, ಸವಾರನು ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಅವಸರ ಅವಸರವಾಗಿ ರೈಲ್ವೆ ಹಳಿ ದಾಟುತ್ತಿರುವುದನ್ನು ಕಾಣಬಹುದು. ಆದರೆ, ಬೈಕ್‌ನ ಟೈರ್ ಟ್ರ್ಯಾಕ್‌ನಲ್ಲಿ ಸಿಲುಕಿಕೊಂಡಿದೆ. ಕೂಡಲೇ ಈತ ಬೈಕ್‌ ಬಿಟ್ಟು ಹಿಂದೆ ಸರಿದಿದ್ದು, ಇದೇ ಕ್ಷಣಕ್ಕೆ ವೇಗವಾದ ರೈಲೊಂದು ಆ ಟ್ರ್ಯಾಕ್‌ನಲ್ಲಿ ಪಾಸಾಗಿದೆ. ಪರಿಣಾಮ ಬೈಕ್ ನಾಲ್ಕು ಭಾಗಗಳಾಗಿ ದೂರ ಹೋಗಿ ಬಿದ್ದಿದೆ.

Advertisement
Click to comment

You must be logged in to post a comment Login

Leave a Reply