Connect with us

    LATEST NEWS

    ಬಂಟ್ವಾಳ – ಗುಡ್ಡಕುಸಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಫಾಳ ಆರೋಗ್ಯ ವಿಚಾರಿಸಿದ ಶಾಸಕ ರಾಜೇಶ್ ನಾಯ್ಕ್

    ಬಂಟ್ವಾಳ ಜುಲೈ 08: ಭಾರೀ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡ ಜರಿದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಂದಾವರ ಗುಂಪುಮನೆ ನಿವಾಸಿ ಸಫಾ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ಬೇಟಿ ನೀಡಿ ಆರೋಗ್ಯ ವಿಚಾರಿಸಿದರು.


    ಘಟನೆಯಲ್ಲಿ ಸಫಾಳ ತಾಯಿ ಝರೀನಾ ಮೃತಪಟ್ಟಿದ್ದು, ಕುಟುಂಬಕ್ಕೆ ಸಾಂತ್ವನ ಹೇಳಿದರು.ಘಟನೆಯ ಬಗ್ಗೆ ಮಾಹಿತಿ ಪಡೆದ ಶಾಸಕರು ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸಫಾಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕ ನೆಲೆಯಲ್ಲಿ ಭರಿಸುವುದಾಗಿ ಅವರು ಕುಟುಂಬಕ್ಕೆ ಭರವಸೆ ನೀಡಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *