KARNATAKA
ಮಾಜಿ ಸಿಎಂ ವೀರಪ್ಪ ಮೊಯಿಲಿ ಸೇರಿದಂತೆ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು ಅಕ್ಟೋಬರ್ 30: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಕಲೆ, ಸಾಹಿತ್ಯ, ಜಾನಪದ, ಕೃಷಿ-ಪರಿಸರ, ವಿಜ್ಞಾನ-ತಂತ್ರಜ್ಞಾನ, ಕ್ರೀಡೆ ಸೇರಿ ವಿವಿಧ ಕ್ಷೇತ್ರಗಳ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ಈ ಬಾರಿ 69 ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಿಂದ ಐವರಿಗೆ ಈ ಬಾರಿ ರಾಜ್ಯೋತ್ಸ ಪ್ರಶಸ್ತಿ ಪಡೆದಿದ್ದಾರೆ. ಜಾನಪದ ಕ್ಷೇತ್ರದಲ್ಲಿ ಲೋಕಯ್ಯ ಶೇರ, ಹೊರದೇಶದ ಸಾಧಕರಲ್ಲಿ ಡಾ. ತುಂಬೆ ಮೊಹಿಯುದ್ದೀನ್, ಯಕ್ಷಗಾನ ಕ್ಷೇತ್ರದಲ್ಲಿ ಸೀತಾರಾಮ ತೋಳ್ಪಾಡಿ, ಸಾಹಿತ್ಯ ಕ್ಷೇತ್ರದಲ್ಲಿ ಡಾ. ಪ್ರಸಾಂತ್ ಮಾಡ್ತಾ, ಶಿಕ್ಷಣ ಕ್ಷೇತ್ರದಲ್ಲಿ ಡಾ. ರಾಜೇಂದ್ರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲೆಯಿಂದ ಸಾಹಿತ್ಯ ಕ್ಷೇತ್ರದಲ್ಲಿ ಮಾಜಿ ಸಿಎಂ ಡಾ. ಎಂ ವೀರಪ್ಪ ಮೊಯಿಲಿ ಅವರು ಆಯ್ಕೆಯಾಗಿದ್ದಾರೆ.
You must be logged in to post a comment Login