Connect with us

KARNATAKA

ರಾಮನಗರ – ಗಂಡಸ್ತನ ಪ್ರಶ್ನೆ ಸಿಎಂ ಎದುರೇ ಹೊಡೆದಾಟಕ್ಕೆ ಮುಂದಾದ ಡಿ.ಕೆ.ಸುರೇಶ್, ಸಚಿವ ಅಶ್ವತ್ಥನಾರಾಯಣ

ರಾಮನಗರ: ರಾಮನಗರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಭಾಗವಹಿಸಿದ್ದ ವಿವಿಧ ಕಾಮಗಾರಿಗಳ ಚಾಲನೆ ಕಾರ್ಯಕ್ರಮದಲ್ಲಿ ಸಚಿವ, ಸಂಸದರ ಗಲಾಟೆ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಎದುರೇ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸಂಸದ‌ ಡಿ.ಕೆ.‌ ಸುರೇಶ್ ಹೊಡೆದಾಟಕ್ಕೆ ಮುಂದಾದ‌ ಪ್ರಸಂಗ ನಡೆಯಿತು.


ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಚಿವ ಅಶ್ವತ್ಥನಾರಾಯಣ ‘ಇವತ್ತು ಏನು ತಪ್ಪಾಗಿದೆ ಎಂದು ನಾಲ್ಕು ಜನರನ್ನು‌‌ ಸೇರಿಸಿ ಘೋಷಣೆ ಕೂಗುತ್ತೀರಿ. ನಾನೇನು ಯಾರ ಜಮೀನಿಗೂ ಕೈ ಹಾಕಿಲ್ಲ. ಯಾವನೋ ಅವನು‌ ಗಂಡಸು ಅನ್ನೋನು’ ಎಂದು ಪ್ರಚೋದಿಸಿದರು. ಇದರಿಂದ ಕುಪಿತಗೊಂಡ ಸುರೇಶ್ ‘ನನ್ನ ಗಂಡಸುತನ ತೋರಿಸಲಾ’ ಎಂದು ಅಶ್ವತ್ಥ ರಾಯಣರತ್ತ ನುಗ್ಗಿದರು. ಸಚಿವ ಅಶ್ವತ್ಥನಾರಾಯಣ ಸಹ‌ ಕೆರಳಿದರು. ನಂತರ ಇಬ್ಬರು‌ ಕೈ ಕೈ ಮಿಲಾಯಿಸಲು ಮುಂದಾದರು. ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ರವಿ ಮೈಕ್ ಕಿತ್ತೆಸೆದರು. ಇದರಿಂದ ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಯಿತು. ಸಂಸದ ಡಿ.ಕೆ.‌ ಸುರೇಶ್ ವೇದಿಕೆಯಲ್ಲೇ ಧರಣಿ ಕುಳಿತರು.

Advertisement
Click to comment

You must be logged in to post a comment Login

Leave a Reply