Connect with us

LATEST NEWS

ರಾಜ್ಯ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ರಮಾನಾಥ ರೈ

ರಾಜ್ಯ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ರಮಾನಾಥ ರೈ

ಮಂಗಳೂರು ಅಗಸ್ಟ್ 29: ಕಾಂಗ್ರೇಸ್ ನ ಹಿರಿಯ ಮುಖಂಡ ಮಾಜಿ ಸಚಿವ ರಮಾನಾಥ ರೈ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆ ಬಗ್ಗೆ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ರಾಜ್ಯ ಹೈಕೋರ್ಟ್ ನಲ್ಲಿ ಅರ್ಜಿಸಲ್ಲಿಸಿದ್ದಾರೆ.

2017 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಸಮಯದಲ್ಲಿ ರಮಾನಾಥ ರೈ ಚಕ್ರವರ್ತಿ ಸೂಲಿಬೆಲೆ ವಿರುದ್ಧ ನೀಡಿದ್ದ ಹೇಳಿಕೆ ವಿರುದ್ಧ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖಂಡ ರಹೀಂ ಉಚ್ಚಿಲ್ ಪ್ರಕರಣ ದಾಖಲಿಸಿದ್ದರು.

ಇದರಂತೆ ಮಂಗಳೂರಿನ 2 ನೇ ಜೆಎಂಎಫ್ ಸಿ ನ್ಯಾಯಾಲಯವು ಕಳೆದ ಜೂನ್ ನಲ್ಲಿ ಐಪಿಸಿ ಸೆಕ್ಷನ್ 500, 504 ರಂತೆ ಪ್ರಕರಣ ದಾಖಲಿಸಿತ್ತು. ಇದಿಗ ಪ್ರಕರಣ ರದ್ಧತಿ ಕೋರಿ ಮಾಜಿ ಸಚಿವ ರಮಾನಾಥ ರೈ ಹೈಕೋರ್ಟ್ ಮೆಟ್ಟಿಲೆರಿದ್ದಾರೆ.

VIDEO

Facebook Comments

comments