LATEST NEWS
ಬಿಜೆಪಿಗೆ ರೌಡಿ ಶೀಟರ್ ಸೇರ್ಪಡೆ -ಇದು ಬಿಜೆಪಿಯ ನೈಜ್ಯ ಸಿದ್ದಾಂತ- ರಮಾನಾಥ ರೈ

ಮಂಗಳೂರು ಡಿಸೆಂಬರ್ 05: ರೌಡಿಗಳನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿರುವುದನ್ನು ಸಮರ್ಥಿಸಿಕೊಂಡಿರುವ ಸಿಟಿ ರವಿ ಹೇಳಿಕೆ ಆ ಪಕ್ಷದ ನೈಜ್ಯ ಸಿದ್ದಾಂತವನ್ನು ಬಹಿರಂಗಪಡಿಸಿದೆ ಎಂದು ಕಾಂಗ್ರೇಸ್ ಮುಖಂಡ ರಮಾನಾಥ ರೈ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ರೌಡಿ ಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದನ್ನು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಮರ್ಥಿಸಿಕೊಂಡಿದ್ದು, ತಮ್ಮ ಪಕ್ಷದ ನೈಜ ಸಿದ್ಧಾಂತವನ್ನು ಬಹಿರಂಗಪಡಿಸಿದ್ದಾರೆ. ಅವರ ಹೇಳಿಕೆಯು ಬಿಜೆಪಿಯನ್ನು ಬೆತ್ತಲೆಗೊಳಿಸಿದೆ’ ಎಂದರು.

ಒಬ್ಬ ವ್ಯಕ್ತಿಯ ಮೇಲೆ ಪ್ರಕರಣ ದಾಖಲಾಗುವುದಕ್ಕೂ, ಆತನನ್ನು ರೌಡಿ ಶೀಟರ್ ಎಂದು ಪರಿಗಣಿಸುವುದಕ್ಕೂ ವ್ಯತ್ಯಾಸ ಇದೆ. ಪದೇ ಪದೇ ಅಪರಾಧ ಕೃತ್ಯಗಳನ್ನು ನಡೆಸಿ ಜನರಲ್ಲಿ ಭಯಹುಟ್ಟಿಸುವ ವ್ಯಕ್ತಿಯನ್ನು ರೌಡಿ ಶೀಟರ್ ಎಂದು ಪೊಲೀಸ್ ಇಲಾಖೆ ಪರಿಗಣಿಸುತ್ತದೆ. ಅಂತಹವರನ್ನು ಪಕ್ಷಕ್ಕೆ ಸೇರ್ಪಡೆ ಮಾಡುವುದನ್ನು ಸಿ.ಟಿ.ರವಿ ಸಮರ್ಥನೆ ಮಾಡಿಕೊಳ್ಳುವುದು ಎಷ್ಟು ಸರಿ’ ಎಂದು ರೈ ಪ್ರಶ್ನಿಸಿದರು. ’ಬುದ್ಧಿವಂತರ ಜಿಲ್ಲೆ ಎಂದೇ ಗುರುತಿಸಿಕೊಂಡ ದಕ್ಷಿಣ ಕನ್ನಡದಲ್ಲಿ ಹತ್ಯೆಗಳು ನಡೆಯುವಷ್ಟರಮಟ್ಟಿಗೆ ಕೋಮು ರಾಜಕಾರಣ ತಾರಕಕ್ಕೆ ಹೋಗಿದೆ. ಒಂದು ಧರ್ಮದವರು ಒನ್ನೊಂದು ಧರ್ಮದವರನ್ನು ಕೊಲೆ ಮಾಡುವುದು ಮಾಮೂಲಿ ಎಂಬಾಂತಾಗಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅವರ ಹೇಳಿಕೆ ಇದಕ್ಕೂ ಅನ್ವಯವಾಗುತ್ತದೆ’ ಎಂದರು.