LATEST NEWS
ದೇಶಕ್ಕಾಗಿ ಜೈಲಿಗೆ ಹೋದವರ ಬಗ್ಗೆ ಟೀಕಿಸಿದ ಸಿ.ಟಿ ರವಿಯಂತವರೇ ನಿಜವಾದ ದೇಶದ್ರೋಹಿಗಳು- ರಮಾನಾಥ ರೈ
ಮಂಗಳೂರು: ದೇಶದ ಮಾಜಿ ಪ್ರಧಾನಿ ನೆಹರೂ ಅವರನ್ನು ಟೀಕಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನಿ ಕಾರ್ಯದರ್ಶಿ ಸಿ.ಟಿ ರವಿ ವಿರುದ್ದ ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದ್ದು, ದೇಶದ ಒಳಿತಿಗಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ. ರವಿಯಂತಹವರೇ ನಿಜವಾದ ದೇಶದ್ರೋಹಿಗಳು’ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂದರೆ ಎಲ್ಲವೂ ತಾನೇ ಎಂದು ರವಿ ಭಾವಿಸಿದಂತಿದೆ. ಸಿ.ಟಿ.ರವಿ, ಸಚಿವ ಕೆ.ಎಸ್. ಈಶ್ವರಪ್ಪ ಅವರಂತಹವರು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ, ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ದೇಶಕ್ಕೆ ನೀಡಿದ ಕೊಡುಗೆ ಅಪಾರ. ಅವರ ಬಗ್ಗೆ ಸಿ.ಟಿ.ರವಿ ಬಗ್ಗೆ ಹಗುರವಾಗಿ ಮಾತನಾಡುತ್ತಲೇ ಗೋಡ್ಸೆಗೆ ದೇಶಪ್ರೇಮಿಯ ಹಣೆಪಟ್ಟಿ ಕಟ್ಟುತ್ತಿದ್ದಾರೆ. ಇದು ಖಂಡನೀಯ’ ಎಂದು ರೈ ಹೇಳಿದರು.