LATEST NEWS
ಎಲ್ಲಾ ಧರ್ಮಗಳ ಕಾರ್ಯಕ್ರಮಗಳು ಕೆಲವೊಮ್ಮೆ ರಸ್ತೆಯಲ್ಲಿ ನಡೆಯುತ್ತದೆ ಅದನ್ನು ತಪ್ಪು ಎಂದು ಹೇಳುತ್ತಾ ಹೋಗಲು ಸಾಧ್ಯ ಇಲ್ಲ – ರಮಾನಾಥ ರೈ

ಮಂಗಳೂರು ಮೇ 31: ಕಂಕನಾಡಿ ಮಸೀದಿ ಹೊರಗಡೆ ನಮಾಜ್ ವಿಚಾರದ ವಿವಾದ ಅನಗತ್ಯವಾಗಿದ್ದು. ದೇವರು ಒಬ್ಬರೇ. ಮಸೀದಿ ಹೊರಗಡೆ ಪ್ರಾರ್ಥನೆ ಮಾಡಿದ ಸಣ್ಣ ವಿಚಾರಕ್ಕೆ ಸುಮೋಟೋ ದಾಖಲಿಸುವ ಅಗತ್ಯ ಇರಲಿಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.
ಕಾಂಗ್ರೆಸ್ ಕಚೇರಿ ಯಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು ಎಲ್ಲಾ ಧರ್ಮಗಳ ಕಾರ್ಯಕ್ರಮಗಳು ಕೆಲವೊಮ್ಮೆ ರಸ್ತೆಯಲ್ಲಿ ನಡೆಯುತ್ತದೆ. ಅದನ್ನು ತಪ್ಪು ಎಂದು ಹೇಳುತ್ತಾ ಹೋಗಲು ಸಾಧ್ಯ ಇಲ್ಲ. ಜಿಲ್ಲೆಯಲ್ಲಿ ಪ್ರಚೋದನಕಾರಿ ಭಾಷಣ , ಕೃತ್ಯ ನಡೆದಾಗಲೂ ಸುಮೋಟೋ ಪ್ರಕರಣ ಆಗಿಲ್ಲ. ಇಂತಹ ಸಣ್ಣ ವಿಷಯವನ್ನು ರಂಪಾಟ ಮಾಡುವ ಅಗತ್ಯ ಇರಲಿಲ್ಲ. ಈ ರೀತಿ ಆ ಪ್ರಾರ್ಥನೆಯ ವಿಡಿಯೋ ಮಾಡಿ ಸೌಹಾರ್ದ್ಯಕ್ಕೆ ಧಕ್ಕೆ ತರುವ ಕಾರ್ಯ ಮಾಡಿದವರ ಮೇಲೆ ಕ್ರಮ ಆಗಬೇಕು ಎಂದು ರಮಾನಾಥ ರೈ ಹೇಳಿದರು.
