LATEST NEWS
ನಾರಾಯಣ ಗುರುಗಳ ಪಠ್ಯ ಕೈಬಿಟ್ಟಿದ್ದರೆ ಜಿಲ್ಲೆಯ ಇಬ್ಬರು ಸಚಿವರು ರಾಜೀನಾಮೆ ನೀಡಬೇಕು – ರಮಾನಾಥ ರೈ

ಮಂಗಳೂರು ಮೇ 20: ಶಾಲೆಗಳ ಪಠ್ಯಪುಸ್ತಕ ಪರಿಷ್ಕರಣೆ ವೇಳೆ ನಾರಾಯಣ ಗುರುಗಳ ಪಠ್ಯ ಕೈ ಬಿಟ್ಟಿರುವುದಕ್ಕೆ ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ನಾರಾಯಣ ಗುರುಗಳ ಪಠ್ಯ ಕೈ ಬಿಟ್ಟಿರುವುದು ದಾರ್ಶನಿಕನಿಗೆ ಮಾಡಿದ ಅಪಮಾನವಾಗಿದೆ ಎಂದ ಅವರು, ನಾರಾಯಣ ಗುರುಗಳ ಹೆಸರನ್ನು ಪಠ್ಯ ಪುಸ್ತಕದಿಂದ ಕೈ ಬಿಡಲಾಗಿದೆ ಎಂಬುದು ಕಾಂಗ್ರೆಸ್ ನ ಅಪಪ್ರಚಾರ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ಈ ಬಗ್ಗೆ ಮಾಧ್ಯಮದವರು, ಚಿಂತಕರು ಮೊದಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅನುಯಾಯಿಗಳು ಹೆಚ್ಚು ಇದ್ದಾರೆ. ಇವರದೇ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದೇ ಜಿಲ್ಲೆಯವರಾಗಿದ್ದಾರೆ. ಇಂತಹ ಪ್ರಮಾದ ನಡೆದಿದ್ದರೆ ಈ ಇಬ್ಬರು ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
