ಹಿಂದೂಗಳ ಮತ ಬೇಡವೆಂದು ನಾನೆಲ್ಲೂ ಹೇಳಿಲ್ಲ – ರಮಾನಾಥ ರೈ
ಮಂಗಳೂರು ಮೇ 08: ಬಂಟ್ವಾಳ ಕ್ಷೇತ್ರ ದಲ್ಲಿ ನನಗೆ ಹಿಂದೂಗಳ ಮತ ಬೇಡ ಎಂದು ನಾನು ಎಲ್ಲಿಯೂ ಹೇಳಲಿಲ್ಲ, ಆದರೆ ಬಿಜೆಪಿ ಮುಖಂಡರು ನನ್ನ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ ಸಚಿವ ರಮಾನಾಥ ರೈ ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಅಭಿವೃದ್ದಿಯ ವಿಚಾರವನ್ನಿಟ್ಟು ಮತ ಕೇಳುತ್ತಿದ್ದೇನೆ ಆದರೆ ಬಿಜೆಪಿ ಕೇವಲ ಅಪಪ್ರಚಾರವನ್ನೆ ತಮ್ಮ ಬಂಡವಾಳವಾಗಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಯಾವುದೇ ಮತೀಯ ಸಂಘಟನೆ ಗಳೊಂದಿಗೆ ಕೈ ಜೋಡಿಸಿಲ್ಲ, ಒಪ್ಪಂದ ಮಾಡಿಕೊಂಡಿಲ್ಲ. ಎಸ್ ಡಿ ಪಿ ಐ ಅವರನ್ನು ನಮಗೆ ಬೆಂಬಲಿಸಿ ಎಂದು ನಾವು ಹೇಳಿಲ್ಲ . ಆದರೆ ಅವರೇ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ್ದಾರೆ ಎಂದು ಸಚಿವ ರಮಾನಾಥ್ ರೈ ತಿಳಿಸಿದ್ದಾರೆ .

ಬಿಜೆಪಿ ಮುಖಂಡರಿಗೆ ಅಭಿವೃದ್ದಿಯ ಯಾವೂದೇ ಅಜೆಂಡಾ ಇಲ್ಲ ಅವರಿಗಿರುವುದು ಕೇವಲ ಸುಳ್ಳು ಅಪಪ್ರಚಾರ ಅಜೆಂಡಾ ಮಾತ್ರ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಗೆ ಪ್ರಮಾಣಿಕತೆ ಇಲ್ಲ, ನಾವು ಪ್ರಾಮಾಣಿಕ ಕೆಲಸ ಮಾಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹತ್ಯಾ ಪ್ರಕರಣಗಳ ಬಂಧಿತ ಆರೋಪಿ ಗಳಲ್ಲಿ ಒಬ್ಬರೂ ಕಾಂಗ್ರೆಸ್ ನವರಿಲ್ಲ. ಆದರೆ ಬಿಜೆಪಿಯ ಅಂಗ ಸಂಸ್ಥೆಗಳ ಕಾರ್ಯಕರ್ತರಿದ್ದಾರೆ. ಮೋದಿಯವರು ಹಿಂದೂಗಳ ಹತ್ಯೆ ಬಗ್ಗೆ ಹೇಳ್ತಾರೆ ಆದರೆ ಮನುಷ್ಯರ ಹತ್ಯೆ ಬಗ್ಗೆ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದರು.