LATEST NEWS
ಹಿಂದೂ ಓಟ್ ಬೇಡ ಅಂತ ಯಾರು ಹೇಳುವುದಿಲ್ಲ – ರಮಾನಾಥ ರೈ

ಹಿಂದೂ ಓಟ್ ಬೇಡ ಅಂತ ಯಾರು ಹೇಳುವುದಿಲ್ಲ – ರಮಾನಾಥ ರೈ
ಮಂಗಳೂರು ಜುಲೈ 17: ಕಾಂಗ್ರೇಸ್ ಎಲ್ಲಾ ಜಾತಿ, ಧರ್ಮ, ಮತ, ಪಂಥ ಗಳ ಏಳಿಗೆಗೆ ದುಡಿಯುವ ಪಕ್ಷವಾಗಿದ್ದು, ನಮಗೆ ಹಿಂದೂಗಳ ಓಟ್ ಬೇಡ ಎಂದು ಯಾರು ಹೇಳುದಿಲ್ಲ. ನಮ್ಮಗೆ ಎಲ್ಲ ಧರ್ಮದವರು ಬೇಕು ಎಂದು ಹೇಳಿದ ಮಾಜಿ ಸಚಿವ ರಮಾನಾಥ ರೈ .
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಮುಸ್ಲಿಮರ ಪಕ್ಷ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ನೀಡಿರುವ ಬಗ್ಗ ಕುರಿತು ಪ್ರತಿಕ್ರಿಯಿಸಿದ ಅವರು ರಾಹುಲ್ ಗಾಂಧಿ ಆ ರೀತಿ ಹೇಳಿಕೆ ನೀಡಲ್ಲ. ಇದೊಂದು ಷಡ್ಯಂತ್ರ ಎಂದು ಅವರು ಹೇಳಿದರು.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೇಶದ ಜನರಿಗೆ ನೀಡಿದ್ದ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ. ಬಿಜೆಪಿ ಎಂದರೆ ಭಾರತೀಯ ಜೂಟ್ ಪಾರ್ಟಿ ಎಂದು ಮಾಜಿ ಸಚಿ ರಮಾನಾಥ್ ರೈ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಎಲ್ಲ ಕ್ಷೇತ್ರಗಳಲ್ಲಿ ಸಂಪೂರ್ಣ ವೈಫಲ್ಯ ಕಂಡಿದೆ. ದೇಶದಲ್ಲಿ ಪೆಟ್ರೋಲ್ , ಗ್ಯಾಸ್ ದರ ಹೆಚ್ಚಳವಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆರಿಗೆ ಈ ಹಿನ್ನೆಲೆಯಲ್ಲಿ ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.
ಕೇಂದ್ರದ ಜನ್ ಧನ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಖಾತೆ ತೆರೆಯಲಾಗಿದೆ? ಎಷ್ಟು ಜನರಿಗೆ ಸಾಲ ನೀಡಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಹೇಳಿದರು.
ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿವೆ. ಮಂಗಳೂರಿನ ಪಂಪ್ ವಲ್ , ತೊಕ್ಕೊಟಿನ ಫೈ ಓವರ್ ಗಳ ಕಾಮಗಾರಿ ಸ್ಥಗಿತಗೊಂಡಿದ್ದು ಜನರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕೇವಲ ಪ್ರಚಾರಕ್ಕಾಗಿ ಗಿಮಿಕ್‌ಗಳನ್ನು ಮಾಡುತ್ತಾಕಾಲ ಕಳೆಯುತ್ತಿದೆ ಎಂದು ಅವರು ಆರೋಪಿಸಿದರು.