Connect with us

    KARNATAKA

    ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರೇ ಸಿಡಿ ಬಿಡುಗಡೆ ಮಾಡಿದ್ದು..ಸಿಡಿಯಲ್ಲಿದ್ದ ಯುವತಿಯ ಹೇಳಿಕೆ

    ಬೆಂಗಳೂರು ಮಾರ್ಚ್ 13: ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಿಡಿ ಬಿಡುಗಡೆ ಬಳಿಕದ ರಾಜಕೀಯ ಮೇಲಾಟಕ್ಕೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಸಿಡಿಯಲ್ಲಿದ್ದ ಯುವತಿ ಮೊದಲ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರೇ ಸಿಡಿ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ.


    ಕೊನೆಗೂ ಸಿಡಿ ಬಿಡುಗಡೆಯಾದ 12 ದಿನಗಳ ನಂತರ ಪ್ರತ್ಯಕ್ಷವಾಗಿರುವ ಯುವತಿ, ರಮೇಶ್ ಜಾರಕಿಹೊಳಿ ಅವರು ನನಗೆ ಕೆಲಸಕೊಡಿಸುವುದಾಗಿ ಹೇಳಿ ನಂಬಿಸಿ ವಂಚಿಸಿದ್ದಾರೆ. ಆದರೆ ಈ ವಿಡಿಯೋದಿಂದಾಗಿ ನನ್ನ ಮಾನ ಹರಾಜಾಗಿದೆ. ನನಗೆ ಯಾವುದೇ ರಾಜಕೀಯ ನಾಯಕರ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.

    ಈ ವಿಡಿಯೋ ಹೇಗೆ ಮಾಡಿದರು ಅಂತ ನನಗೆ ಗೊತ್ತಿಲ್ಲ. ರಮೇಶ್ ಜಾರಿಕಿಹೊಳಿ ಅವರೇ ಸಿಡಿ ಬಿಡುಗಡೆ ಮಾಡಿದ್ದಾರೆ. ಇದರಿಂದ ನನ್ನ ತಂದೆ, ತಾಯಿ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನೂ ಕೂಡ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೆ ತಮ್ಮ ಕುಟುಂಬಕ್ಕೆ ರಕ್ಷಣೆ ಕೊಡಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಯುವತಿ ಮನವಿ ಮಾಡಿದ್ದಾರೆ. ಅಜ್ಞಾತ ಸ್ಥಳದಿಂದ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ಅವರ ವಿರುದ್ಧವೇ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply