KARNATAKA
ಸೆಕ್ಸ್ ವಿಡಿಯೋ ಪ್ರಕರಣ – ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ
ಬೆಂಗಳೂರು ಮಾರ್ಚ್ 3: ಕಾಮಲೀಲೆಯ ವಿಡಿಯೋ ಹೊರ ಬಂದ ಹಿನ್ನಲೆ ಬೆಳಗಾವಿಯ ಸಾಹುಕಾರ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ರಾಜೀನಾಮೆ ನೀಡಿದ್ದಾರೆ.
ಸರಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದ ವಿಡಿಯೋ ನಿನ್ನ ಹೊರಬಂದಿದ್ದು ಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ನಂತರ ಈ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ರಮೇಶ್ ಜಾರಕಿಹೊಳಿ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ತಿಳಿಸಿದ್ದರು. ಆದರೆ ದೇಶದಾದ್ಯಂತ ಈ ವಿಡಿಯೋ ಸುದ್ದಿ ಮಾಡುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಸೂಚಿಸಿತ್ತು. ಈ ಬೆನ್ನಲ್ಲೇ ಇದೀಗ ರಾಜೀನಾಮೆ ನೀಡಲು ಒಪ್ಪಿಕೊಂಡಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ಕೆಪಿಟಿಸಿಎಲ್‍ನಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿ ಸಂತ್ರಸ್ತ ಯುವತಿಯನ್ನು ಕಾಮಕ್ರಿಯೆಗೆ ಬಳಸಿಕೊಂಡಿರುವುದಾಗಿ ದೂರು ಕೊಡಲಾಗಿತ್ತು. ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ಮೇರೆಗೆ ದಿನೇಶ್ ಕಲ್ಲಹಳ್ಳಿ ಅವರು ನಿನ್ನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಲ್ಲದೆ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಪಿ ಅನುಚೇತ್, ಸಂತ್ರಸ್ತೆಯ ಹೇಳಿಕೆ ಪಡೆದ ಮೇಲಷ್ಟೇ ಎಫ್‍ಐಆರ್ ದಾಖಲಿಸುವುದಾಗಿ ತಿಳಿಸಿದ್ದರು.