KARNATAKA
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ,ಇಬ್ಬರು ಆರೋಪಿಗಳ ಫೊಟೊ ಬಿಡುಗಡೆ ಮಾಡಿದ NIA..
ಬೆಂಗಳೂರು : ನಾಡನ್ನು ತಲ್ಲಣಗೊಳಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಫೊಟೊಗಳನ್ನು ಎನ್‌ಐಎ(NIA) ಬಿಡುಗಡೆ ಮಾಡಿದೆ.
ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಓರ್ವ ಆರೋಪಿ ಮುಝಮ್ಮಲ್ ಶರೀಫ್ ನನ್ನು ಮಾರ್ಚ್ 28 ರಂದು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತಿಬ್ಬರು ಆರೋಪಿಗಳ ಪೊಟೊಗಳನ್ನು ಎನ್‌ಐಎ ಬಿಡುಗಡೆ ಮಾಡಿದ್ದು ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್‌ಐಎ ಘೋಷಣೆ ಮಾಡಿದೆ. ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜಿಬ್ ಫೋಟೋವನ್ನು ಬಿಡುಗಡೆ ಮಾಡಲಾಗಿದ್ದು ಈ ಆರೋಪಿಗಳ ಶೋಧ ಕಾರ್ಯ ಎನ್‌ಐಎ ಮುಂದುವರೆಸಿದ್ದಾರೆ.