LATEST NEWS
ಆರೋಗ್ಯ ಸಚಿವ ಶ್ರೀರಾಮುಲುಗೆ ಮಾತೃ ವಿಯೋಗ
ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ(95) ಅವರು ನಿನ್ನೆ ರಾತ್ರಿ 11.50ಕ್ಕೆ ನಿಧನರಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿರುವ ಶ್ರೀರಾಮುಲು ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ ಕಾರಣದಿಂದ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇನೆ ಎಂದು ತಿಳಿಸಿದ್ದಾರೆ.
ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಅವರು ಇತ್ತೀಚೆಗಷ್ಟೇ ಕೋವಿಡ್-19 ಸೋಂಕಿಗೆ ತುತ್ತಾಗಿದ್ದರು. ಬೆಂಗಳೂರಿನ ಬೌರಿಂಗ್ ಆಸ್ಪತ್ರಗೆ ದಾಖಲಾಗಿದ್ದ ಸಚಿವರ ತಾಯಿ ಸಂಪೂರ್ಣ ಗುಣಮುಖರಾಗಿ ಗುರುವಾರವಷ್ಟೇ ಡಿಸ್ಚಾರ್ಜ್ ಆಗಿ ಬಳ್ಳಾರಿಯ ಮನೆಗೆ ತೆರಳಿದ್ದರು. ನಿನ್ನೆ ರಾತ್ರಿ ಬಳ್ಳಾರಿಯಲ್ಲಿ ವಯೋಸಹಜ ಕಾರಣದಿಂದ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಈ ವೇಳೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 11.50ಕ್ಕೆ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 5.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.
Facebook Comments
You may like
Click to comment
You must be logged in to post a comment Login