ಮಂಗಳೂರು, ಮಾರ್ಚ್ 19: ಶವ್ವಾಲ್ನ ಪ್ರಥಮ ಚಂದ್ರದರ್ಶನ ಇಂದು ಮುಸ್ಸಂಜೆ ಆಗಿರುವುದರಿಂದ ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ ಎಂದು ಮಸ್ಜಿದ್ ಝೀನತ್ ಭಕ್ಷ್ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇನ್ನು ಉಡುಪಿ ಜಿಲ್ಲೆಯಲ್ಲೂ ಕೂಡ ಶುಕ್ರವಾರ ಈದುಲ್ ಫಿತ್ರ್ ಆಚರಿಸಲು ಉಡುಪಿ ಜಿಲ್ಲಾ ನಾಇಬ್ ಖಾಝಿ ಬಿ ಕೆ ಅಬ್ದುರ್ರಹ್ಮಾನ್ ಮದನಿ ಮೂಳೂರು ಕರೆ ನೀಡಿದ್ದಾರೆ ಎಂದು ಉಡುಪಿ ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಎಂ.ಎ ಬಾವು ಮೂಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.