Connect with us

DAKSHINA KANNADA

ವಿಧ್ಯಾರ್ಥಿನಿಯ ಅತ್ಯಾಚಾರ ಪ್ರಕರಣ – ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗೆ ಅಪಘಾತ

ಪುತ್ತೂರು ಜೂನ್ 26: ಕಾಲೇಜು ವಿಧ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರದ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ.


ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ ಆತನ ಪತ್ನಿಯ ಅಕ್ಕ‌ನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ ಎಂದು ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಳು. ಆದರೆ ಆರೋಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದ,

ಶುಕ್ರವಾರ ಆರೋಪಿ ಪುರುಷೋತ್ತಮ ಪೋಲೀಸರ ಕಣ್ಣು ತಪ್ಪಿಸಿ ಬೆಂಗಳೂರು ಕಡೆಗೆ ಕಾರಿನಲ್ಲಿ ಸ್ವತಃ ಡ್ರೈವ್ ಮಾಡಿಕೊಂಡು ಹೋಗುವಾಗ ಕಡಬ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಲ್ಲಿ ಅತ್ಯಾಚಾರ ಆರೋಪಿ ಪುರುಷೋತ್ತಮನಿಗೆ ಗಾಯಗಳಾಗಿದ್ದು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಪೋಲೀಸ್ ಕಾವಲಿನಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *