ಬೆಂಗಳೂರು ಜನವರಿ 14: 6 ವರ್ಷ ಪ್ರಾಯದ ಪುಟಾಣಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದ್ದು, ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.


ಬಂಧಿತ ಆರೋಪಿಯನ್ನು ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಎಂದು ಗುರುತಿಸಲಾಗಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್​ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗುವ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ. ಸದ್ಯ, ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿ ಅಭಿಷೇಕ್​ನನ್ನು ಬಂಧಿಸಿದ್ದಾರೆ. ಇನ್ನು, ಅಭಿಷೇಕ್​ ಕುಮಾರ್​ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದನು.

Share Information