LATEST NEWS
ಅತ್ಯಾಚಾರವೆಸಗಿ ಕೊಲೆಗೈದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ
ಮಂಗಳೂರು ಸೆಪ್ಟೆಂಬರ್ 26: ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಕೊಣಾಜೆಯಲ್ಲಿ ನಡೆದಿದೆ. ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಹೂಹಾಕುವಕಲ್ಲುಬಳಿಯ ಬೆಳ್ಳೇರಿ ಎಂಬಲ್ಲಿ ಘಟನೆ ನಡೆದಿದ್ದು, ಸಾವನ್ನಪ್ಪಿರುವ ಮಹಿಳೆಯನ್ನು ಕುಸುಮ (50) ಎಂದು ಗುರುತಿಸಲಾಗಿದೆ. ಮಹಿಳೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮಹಿಳೆ ವಿವಸ್ತ್ರ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸುಟ್ಟ ಗಾಯಗಳೂ ಕಂಡುಬಂದಿದೆ. ಮನೆಯ ಕರ್ಟನ್ ಕೂಡಾ ಅರ್ಧ ಸುಟ್ಟ ರೀತಿಯಲ್ಲಿದೆ. ಅಗ್ನಿ ಆಕಸ್ಮಿಕವಾಗಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
You must be logged in to post a comment Login