KARNATAKA
ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್..!
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು ಸದ್ಯ ಜೈಲೇ ಗತಿಯಾಗಿದೆ.
ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು (Bail) ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮೂರು ಅರ್ಜಿಗಳನ್ನು ವಜಾಗೊಳಿಸಿದೆ.ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್ ನಲ್ಲಿ ದಾಖಲಾಗಿದ್ದ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಇನ್ನೊಂದು ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶ ಪ್ರಕಟ ಮಾತ್ರ ಬಾಕಿ ಉಳಿದಿದೆ.