KARNATAKA
ಸಂಶೋಧನಾ ವಿದ್ಯಾರ್ಥಿನಿ ಜೊತೆಗಿದ್ದಾಗ ಪತ್ನಿ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಹಾಕಿಕೊಂಡ ಪ್ರೋಫೆಸರ್
ಮೈಸೂರು: ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗುವ ಸಂದರ್ಭ ಕಾಮುಕ ಪ್ರಾಧ್ಯಾಪಕ ಪತ್ನಿ ಎದುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ತನ್ನ ವಿಧ್ಯಾರ್ಥಿನಿಯನ್ನು ಕಾಮತೃಷೆಗೆ ಬಳಸಿಕೊಂಡ ಪ್ರಾಧ್ಯಾಪಕ ಮೇಲೆ ಸ್ವತಃ ಅವರ ಹೆಂಡತಿಯೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಮೂಲಕ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮತ್ತೊಂದು ಕಾಮಕಾಂಡ ಬಯಲಾಗಿದ್ದು, ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೋ.ರಾಮಚಂದ್ರ ವಿರುದ್ಧ ಆರೋಪ ಕೇಳಿ ಬಂದಿದೆ. ಸಂತ್ರಸ್ತೆ ಜಯಲಕ್ಷ್ಮಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಸಂತ್ರಸ್ತೆ ರಾಮಚಂದ್ರ ಬಳಿ ಪಿಎಚ್ ಡಿ ಮಾರ್ಗದರ್ಶನ ಪಡೆಯುತ್ತಿದ್ದಳು. ಹೀಗಾಗಿ ರಾಮಚಂದ್ರ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡಿದ್ದ, ಈ ವೇಳೆ ಸಂತ್ರಸ್ತೆ ಕೂಗಾಟ, ಚೀರಾಟ ನಡೆಸಿದ್ದಾಳೆ. ಇದೇ ಸಂದರ್ಭದಲ್ಲಿ ಪ್ರಾಧ್ಯಾಪಕ ರಾಮಚಂದ್ರ ಪತ್ನಿ ಲೋಲಾಕ್ಷಿ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಸಂತ್ರಸ್ತ ಯುವತಿ ಹಾಗೂ ಪತಿಯನ್ನು ಠಾಣೆಗೆ ಕರೆತಂದಿದ್ದಾರೆ.
ರಾಮಚಂದ್ರ ಪತ್ನಿ ಲೋಲಾಕ್ಷಿ ಕೂಡ ವಿವಿಯಲ್ಲಿ ಪ್ರಾಧ್ಯಾಪಕಿಯಾಗಿದ್ದು, ಇದೀಗ ಪೊಲೀಸರು ಆರೋಪಿ ರಾಮಚಂದ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ನನ್ನ ಪತಿ ಪ್ರೊ.ರಾಮಚಂದ್ರ ಡಿಪಾರ್ಟ್ಮೆಂಟ್ನಲ್ಲೇ ವಿದ್ಯಾರ್ಥಿನಿಯರ ಜೊತೆ ಸಂಬಂಧ ಇಟ್ಟುಕೊಂಡಿದ್ದಾರೆ. ಅವರಿಂದ ಪಿಎಚ್ಡಿ ಮಾರ್ಗದರ್ಶನ ಪಡೆಯುವ ಕೆಲ ಪುರುಷ ವಿದ್ಯಾರ್ಥಿಗಳು ಪತಿಯ ಬಳಿಗೆ ಯುವತಿಯರನ್ನು ಕಳುಹಿಸುತ್ತಿದ್ದರು. ನನ್ನ ಪತಿ ಹಲವು
ವಿದ್ಯಾರ್ಥಿನಿಯರನ್ನು ಬಳಸಿಕೊಂಡಿದ್ದಾರೆ. ಇವೆಲ್ಲದರ ಬಗ್ಗೆ ನನಗೆ ಮೊದಲಿನಿಂದಲೂ ಅನುಮಾನವಿತ್ತು. ಅದು ಇಂದು ಸಾಬೀತಾಗಿದೆ ಎಂದಿರುವ ಪತ್ನಿ ಲೋಲಾಕ್ಷಿ, ಇವತ್ತು ನಡೆದ ಘಟನೆಯನ್ನೂ ಪೊಲೀಸರಿಗೆ ವಿವರಿಸಿದ್ದಾರೆ.